ನ್ಯೂಸ್ ನಾಟೌಟ್: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಭಾನುವಾರ (ಮೇ೧೯) FIR ದಾಖಲಾಗಿದೆ. ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ಠಾಣಾಧಿಕಾರಿಗಳಿಗೆ ಅವಾಚ್ಯವಾಗಿ ಬೈದು ಬೆದರಿಸಿದ್ದಾರೆ. ಮಾತ್ರವಲ್ಲ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸ್ ಇಲಾಖೆಯ ಹಾಗೂ ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ ದುರ್ವರ್ತನೆ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಪೂಂಜಾ ವಿರುದ್ಧ ಅ.ಕ್ರ. 57/2024 , ಕಲಂ:353, 504 IPC ರಂತೆ ಪ್ರಕರಣ ದಾಖಲಿಸಲಾಗಿದೆ. ಏನಿದು ಪ್ರಕರಣ..? ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಸದ್ರಿ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳನ್ನು ಪೊಲೀಸರು ಪತ್ತೆ ಮಾಡಿದ್ದರು. ಆರೋಪಿಗಳಾದ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಶೆಟ್ಟಿ (35) ಎಂಬವರುಗಳ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಿನಾಂಕ 18.05.2024 ರಂದು ಅ.ಕ್ರ: 56/2024, ಕಲಂ: 9B(1)(b) Explosive act 1884 ಕಲಂ 5 The Explosives Substance Act-1908 ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಆರೋಪಿಗಳ ಪೈಕಿ ಶಶಿರಾಜ್ ಶೆಟ್ಟಿ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಪ್ರಮುಖ ಆರೋಪಿ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್ ಪರವಾಗಿ ಶಾಸಕರಾದ ಹರೀಶ್ ಪೂಂಜಾ ತಮ್ಮ ಸಂಗಡಿಗರೊಂದಿಗೆ ಬಂದು ದಿನಾಂಕ 18.05.2024 ರಂದು ರಾತ್ರಿ, ಬೆಳ್ತಂಗಡಿ ಠಾಣೆಗೆ ಭೇಟಿ ನೀಡಿ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಆರೋಪಿಯು ಶಾಸಕರ ಪಕ್ಷದ ಕಾರ್ಯಕರ್ತನಾಗಿದ್ದು ಆತನನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವ್ಯಾಚವಾಗಿ ಬೈದು ಬೆದರಿಸಿದ್ದಾರೆ ಅನ್ನಲಾದ ವಿಡಿಯೋ ಕೂಡ ವೈರಲ್ ಆಗಿತ್ತು.
- +91 73497 60202
- [email protected]
- November 25, 2024 2:25 PM