Student Hanging: ರಾತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ..! ಆತ್ಮಹತ್ಯೆಯಲ್ಲ ಕೊಲೆ ಎಂದ ಹಾಸ್ಟೆಲ್ ವಿದ್ಯಾರ್ಥಿನಿಯರು..!

ನ್ಯೂಸ್ ನಾಟೌಟ್: ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹರ್ಷಿತಾ ಹಾಸ್ಟೆಲ್‌ನಲ್ಲಿ (Hostel) ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ. ಸಾವು ಅನುಮಾನಾಸ್ಪದ ರೀತಿಯಲ್ಲಿ ಕಂಡಿದ್ದು, ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ(18) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಗುರುವಾರ(ಮೇ.16) ರಾತ್ರಿ ಹಾಸ್ಟೆಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ. Click 👇