- +91 73497 60202
- [email protected]
- November 24, 2024 9:49 AM
ನ್ಯೂಸ್ ನಾಟೌಟ್: ಶಾಸಕ ಹರೀಶ್ ಪೂಂಜಾ (Harish Poonja) ಬಂಧನ ಪ್ರಯತ್ನದ ಬಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಪದೇಪದೆ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲಾಗದು ಎಂದು ಶಾಸಕರ ಪರ ಮಾತನಾಡಿದ್ದಾರೆ. ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನೀಯ. ಪೂಂಜಾ ಭಾಷಣ ನೋಡಿದ್ದೇನೆ, ಅವರ ಜತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ. ಅದು ಸರಿ ಅಲ್ಲ ಎಂಬುದು ಪೂಂಜಾರಿಗೂ ಕೂಡ ಗೊತ್ತಾಗಿದೆ. ಹಾಗೆಂದು ಪದೇಪದೆ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಆಗಲ್ಲ. ಶಾಸಕರನ್ನು ಅರೆಸ್ಟ್ ಮಾಡುವ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದಾಗುವುದಕ್ಕೆಲ್ಲ ಸರ್ಕಾರ, ಇಲಾಖೆ ಹೊಣೆ ಆಗಬೇಕಾಗುತ್ತದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಡಲು ನೀವೇ ಕುಮ್ಮಕ್ಕು ಕೊಡುತ್ತಿದ್ದೀರಿ. ಶಶಿರಾಜ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಶಾಸಕರ ಬಂಧನಕ್ಕೆ ಮುಂದಾಗುವುದನ್ನು ಕೈ ಬಿಡಬೇಕು. ಗೃಹ ಸಚಿವರು ಎಸ್ಪಿ ಜತೆ ಮಾತನಾಡಿ ಸೂಚನೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ. ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಹರೀಶ್ ಪೂಂಜಾರನ್ನು ಬಂಧಿಸಲು ಪೊಲೀಸರು ಬೆಳ್ತಂಗಡಿಯ ನಿವಾಸಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ವಾಗ್ವಾದವೂ ನಡೆದಿದೆ. ಶಾಸಕರ ಮನೆಯಲ್ಲಿ ಪೊಲೀಸರು ಮತ್ತು ವಕೀಲ ನಡುವೆ ದೀರ್ಘ ಚರ್ಚೆ ನಡೆದಿದ್ದು, ಚರ್ಚೆಯ ಬಳಿಕ ಮಾತನಾಡಿದ ವಕೀಲ, “ಕಾನೂನು ಹೋರಾಟ ಮಾಡಲಾಗುವುದು, ಇದರಲ್ಲಿ ಸರ್ಕಾರದ ಒತ್ತಡವಿದೆ. ಹರೀಶ್ ಪೂಂಜಾ ಬೆಳವಣಿಗೆಯನ್ನು ಸಹಿಸಲಾಗದೆ ಕಾಂಗ್ರೆಸ್ ಹೀಗೆ ಮಾಡುತ್ತಿದೆ” ಎಂದು ಹೇಳಿಕೆ ನೀಡಿದ್ದಾರೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ