ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ, ನನ್ನ ತಾಳ್ಮೆ ಪರೀಕ್ಷೆ ಮಾಡಬೇಡ ಎಂದು ಪ್ರಜ್ವಲ್‌ಗೆ ಖಡಕ್ ವಾರ್ನಿಂಗ್ ಕೊಟ್ಟ ಹೆಚ್‌.ಡಿ.ಡಿ..! ಹೆಚ್.ಡಿ.ದೇವೇಗೌಡರು ಹಂಚಿಕೊಂಡ ಪತ್ರದಲ್ಲೇನಿದೆ..?

ನ್ಯೂಸ್ ನಾಟೌಟ್: ಪ್ರಜ್ವಲ್‌ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು, ನನ್ನ ತಾಳ್ಮೆಯನ್ನು ಪರೀಕ್ಷಿಸಬೇಡ ಎಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಮೊಮ್ಮಗನಿಗೆ ಖಡಕ್ ಎಚ್ಚರಿಕೆ ನಿಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ ಪತ್ರವನ್ನು ಹಂಚಿಕೊಂಡಿರುವ ಮಾಜಿ ಪ್ರಧಾನಿ ದೇವೇಗೌಡರು, ಈ ಎಚ್ಚರಿಕೆಗೆ ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಕೂಡಲೇ ಹಿಂದಿರುಗಿ ಬರಬೇಕು ಎಂದು ಹೇಳಿದ್ದಾರೆ. ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು ಎಂದಿದ್ದಾರೆ. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನಾದರೆ ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿದ್ದೂ ಆಗಿದೆ ಎಂದಿದ್ದಾರೆ. ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ಅವನನ್ನು ರಕ್ಷಿಸುವ ಪ್ರಶ್ನೆಯೇ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ದೀರ್ಘ ಪತ್ರ ಬರೆದಿದ್ದಾರೆ. Click 👇