ನ್ಯೂಸ್ ನಾಟೌಟ್: ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಗೆ ಬೆಂಗಳೂರು 42ನೇ ಎಸಿಎಂಎಂ ನ್ಯಾಯಾಲಯವು ಒಂದು ದಿನದ ಮಟ್ಟಿಗೆ (22 ಗಂಟೆ) ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಸದ್ಯಕ್ಕೆ ರೇವಣ್ಣ ಅವರಿಗೆ ರಿಲೀಫ್ ಸಿಕ್ಕಿದೆ.
ಈ ಮಧ್ಯೆ ಲೈಂಗಿಕ ಕಿರುಕುಳ ಆರೋಪ ಮತ್ತು ಆರೋಪಿ ಪ್ರಭಾವಿ ಆದ ಕಾರಣ ನೀಡಿ ಎಸ್.ಐ.ಟಿ ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಗೆ ಮನವಿ ಮಾಡಿದೆ. ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಲ್ಲಿ ಬಂಧನಕ್ಕೀಡಾಗಿ 11 ದಿನದ ಬಳಿಕ ಎಚ್ಡಿ ರೇವಣ್ಣ ಬಿಡುಗಡೆಯಾಗಿತ್ತು. ಈಗ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ಬಂಧನವಾಗವ ಸಾಧ್ಯತೆ ಇತ್ತು. ಈ ಹಿನ್ನೆಲೆ ಸ್ವತಃ ರೇವಣ್ಣ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಸದ್ಯ ಕೋರ್ಟ್ ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಮಧ್ಯಾಹ್ನ 3 ಗಂಟೆಯವರೆಗೂ ಜಾಮೀನು ನೀಡಿದೆ.
ಮತ್ತೆ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಎಚ್ಡಿ ರೇವಣ್ಣ ಅವರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ. ಆ ಬಳಿಕ ವಿಚಾರಣೆ ನಡೆಸಿ ಜಾಮೀನು ಅವಧಿಯನ್ನು ವಿಸ್ತರಣೆ ಮಾಬಹುದು ಅಥವಾ ಜಾಮೀನು ನಿರಾಕರಿಸಬಹುದು ಎಂದು ವರದಿ ತಿಳಿಸಿದೆ.
Click 👇