ನ್ಯೂಸ್ ನಾಟೌಟ್: ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್ ಅನ್ನು ತಡೆದು ತಪಾಸಣೆ ನಡೆಸಲಾಗಿದ ಘಟನೆ ಬಿಹಾರದ ಸಮಷ್ಟಿಪುರದಲ್ಲಿ ಬಾನುವಾರ(ಮೇ.12) ನಡೆದಿದೆ. ಬಿಜೆಪಿ-NDA ಸದಸ್ಯರಿಗೆ ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿರುವ ಚುನಾವಣಾಧಿಕಾರಿಗಳು, ವಿರೋಧ ಪಕ್ಷಗಳ ನಾಯಕರನ್ನು ಮಾತ್ರ ಗುರಿಯಾಗಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಟೀಕಿಸಿದ್ದಾರೆ.
ಪೊಲೀಸರನ್ನೊಳಗೊಂಡಂತೆ ಕೆಲವು ಅಧಿಕಾರಿಗಳು ಹೆಲಿಕಾಪ್ಟರ್ ಅನ್ನು ಸುತ್ತುವರಿದಿರುವುದು ಹೆಲಿಕಾಪ್ಟರನ್ನು ಪರಿಶೀಲಿಸಿದ್ದಾರೆ. ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಜೇಶ್ ರಾಥೋರ್, “ಕೇರಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಲಿಕಾಪ್ಟರ್ ಅನ್ನು ತಪಾಸಣೆಗೊಳಪಡಿಸಿದ ನಂತರ, ಇದೀಗ ರಾಜ್ಯದಲ್ಲಿ ಒಂದರ ಹಿಂದೆ ಒಂದು ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್ ಅನ್ನು ಬಿಹಾರದ ಸಮಷ್ಟಿಪುರದಲ್ಲಿ ತಪಾಸಣೆಗೊಳಪಡಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.
Click 👇