ನ್ಯೂಸ್ ನಾಟೌಟ್: ದೆಹಲಿಯಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ನವದೆಹಲಿಯ ನಾರ್ತ್ ಬ್ಲಾಕ್ನಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ಗೆ ಬಾಂಬ್ ಬೆದರಿಕೆ (Bomb Threat) ಮೇಲ್ ಬಂದಿತ್ತು. ಕೂಡಲೇ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ. ದೆಹಲಿ ಪೊಲೀಸರು ಮೇ 1 ರಂದು ರಾಜಧಾನಿ ನಗರದ ಸುಮಾರು 150 ಶಾಲೆಗಳಿಗೆ ಕಳುಹಿಸಲಾದ ಬಾಂಬ್ ಬೆದರಿಕೆ ಇಮೇಲ್ಗಳ ಐಪಿ (ಇಂಟರ್ನೆಟ್ ಪ್ರೋಟೋಕಾಲ್) ವಿಳಾಸವನ್ನು ಪತ್ತೆಹಚ್ಚಿದ್ದಾರೆ.
ಬೃಹತ್ ಸ್ಥಳಾಂತರಿಸುವಿಕೆ ಮತ್ತು ಶೋಧ ಕಾರ್ಯಾಚರಣೆಗಳನ್ನು ಪ್ರೇರೇಪಿಸಿದ ಈ ವಂಚಕ ಇಮೇಲ್ಗಳನ್ನು ಬುಡಾಪೆಸ್ಟ್ನಲ್ಲಿ ಪತ್ತೆಹಚ್ಚಲಾಗಿದೆ ಎಂದು ವರದಿ ತಿಳಿಸಿದೆ. ಬೆಂಗಳೂರಿನಲ್ಲೂ ವಾರಕ್ಕೆ 4 ರಿಂದ 4 ಬಾಂಬ್ ಬೆದರಿಕೆಗಳು ಬರುತ್ತಿರುವುದು ವರದಿಯಾಗುತ್ತಿವೆ. ಈ ನಡುವೆ ದೆಹಲಿಯಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Click 👇