ನ್ಯೂಸ್ ನಾಟೌಟ್: 2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.
ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಿದ್ದು, ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ (Indian Citizenship) ನೀಡುವುದು ಕಾಯ್ದೆಯ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರವು 300 ಜನರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದರ ಭಾಗವಾಗಿಯೇ 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಲಾಗಿದೆ.
ಪಾಕಿಸ್ತಾನದಿಂದ ಬಂದು, ದೆಹಲಿಯ ಆದರ್ಶ ನಗರದಲ್ಲಿ ವಾಸಿಸುತ್ತಿರುವ ಹಲವರಿಗೆ ಭಾರತದ ಪೌರತ್ವ ನೀಡಲಾಗಿದ್ದು, ಅವರೀಗ ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ಸೇರಿ ಹಲವರು ಭಾರತದ ಪೌರತ್ವ ಹಿಡಿದಿರುವ ವಿಡಿಯೊ ಈಗ ಭಾರಿ ವೈರಲ್ ಆಗಿದೆ. ಹೀಗೆ, ಪಾಕಿಸ್ತಾನದಲ್ಲಿ ಬಹುಸಂಖ್ಯಾತರಿಂದ ಸಂಕಷ್ಟ ಅನುಭವಿಸಿ, ಭಾರತಕ್ಕೆ ಬಂದು ನೆಲೆಸಿದ ಹಿಂದುಗಳಿಗೆ ಪೌರತ್ವ ದೊರೆತಿದ್ದು, ಅವರ ಇಡೀ ಕುಟುಂಬವು ಸಂತಸ ವ್ಯಕ್ತಪಡಿಸಿದೆ.
Click 👇