- +91 73497 60202
- [email protected]
- November 24, 2024 7:41 AM
ನ್ಯೂಸ್ ನಾಟೌಟ್: ರಕ್ಷಕರಿಗೇ ರಕ್ಷಣೆಯ ಅವಶ್ಯಕತೆಯ ವಿಚಿತ್ರ ಕೇಸ್ ವೊಂದು ಬೆಳಕಿಗೆ ಬಂದಿದೆ. ಅಮಾನತು ಶಿಕ್ಷಿಗೆ ಶಿಫಾರಸು ಮಾಡಿದ್ದಾರೆ ಎಂಬ ಕೋಪಕ್ಕೆ ಬಾಣಸವಾಡಿ ಠಾಣೆಯ ಇನ್ಸ್ಪೆಕ್ಟರ್ ಮತ್ತು ಎಸಿಪಿಗೆ ಪೊಲೀಸ್ ಪೇದೆ ಚಾಕುವಿನಿಂದ ಇರಿದು ಕೊಲೆ ಮಾಡೋದಾಗಿ ಜೀವ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರೇಣುಕಾ ನಾಯಕ್ ಜೀವ ಬೆದರಿಕೆ ಹಾಕಿದ ಪೊಲೀಸ್ ಪೇದೆ ಎಂದು ತನಿಖೆಯಲ್ಲಿ ಬಯಲಾಗಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರೌಡಿಶೀಟರ್ ಕಾರ್ತಿಕೇಯನ್ ಹತ್ಯೆಯಾಗಿತ್ತು. ಈ ಕೃತ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಪೊಲೀಸ್ ಪೇದೆಗಳಾದ ಸಂತೋಷ್, ಪುಟ್ಟಸ್ವಾಮಿ, ವಿನೋದ್ ರನ್ನು ಪೂರ್ವವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್. ಜೈನ್ ಅಮಾನತುಗೊಳಿಸಿದ್ದರು ಎನ್ನಲಾಗಿದೆ. ಬೆದರಿಕೆ ಹಾಕಿದ್ದ ಪೊಲೀಸ್ ಪೇದೆ ರೇಣುಕಾ ನಾಯಕ್ ರನ್ನೂ ಅಮಾನತು ಮಾಡುವಂತೆ ಶಿಫಾರಸು ಮಾಡಲಾಗಿತ್ತು. ಈ ವಿಷಯ ತಿಳಿದು ಬಾಣಸವಾಡಿ ಉಪ ವಿಭಾಗದ ಎಸಿಪಿ ಹಾಗೂ ಇನ್ಸ್ಪೆಕ್ಟರ್ ಗೆ ಪೇದೆ ರೇಣುಕಾ ನಾಯಕ್ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಆತಂಕಗೊಂಡ ಎಸಿಪಿ, ಕೊನೆ ಕ್ಷಣದಲ್ಲಿ ತಮ್ಮ ಶಿಫಾರಸು ಹಿಂಪಡೆದು. ಒಂದು ತಿಂಗಳು ರಜೆ ಕೊಟ್ಟು ಕಳಿಸಿದ್ದರು ಎಂದು ತಿಳಿದುಬಂದಿದೆ. ಈ ಪ್ರಕರಣ ತಿಳಿದು ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ