ನ್ಯೂಸ್ ನಾಟೌಟ್: ಮಳೆಯ ಆರ್ಭಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಅವಾಂತರಗಳು ಸಂಭವಿಸಿದೆ. ಇದೀಗ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ರಸ್ತೆಯಲ್ಲೆಲ್ಲ ನೀರು ತುಂಬಿಕೊಂಡು ವಾಹನ ಸವಾರರು ಪರದಾಟ ನಡೆಸಿದ್ದಾರೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಕಷ್ಟಕ್ಕೆ ಒಳಗಾಗಬೇಕಾಯಿತು.
ರಸ್ತೆಯಲ್ಲಿ ಗುಂಡಿ ಇದ್ದರೆ ಎಂಬ ಭಯದಲ್ಲಿ ವಾಹನ ಸವಾರರು ಸಂಚರಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇದೇ ವೇಳೆ ಜಾಲ್ಸೂರು ಗೇಟ್ ಸಮೀಪ ನೀರು ನಿಂತು ವಾಹನ ಸವಾರರು ಕೂಡ ಬಹಳಷ್ಟು ತೊಂದರೆಗೆ ಒಳಗಾಗಬೇಕಾಯಿತು. ಮಳೆ ಬಂದಾಗ ಸರಿಯಾದ ಚರಂಡಿ ವ್ಯವಸ್ಥೆ ಮಾಡದಿರುವುದೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂತಹ ಅವಾಂತರ ಸಂಭವಿಸುವುದಕ್ಕೆ ಪ್ರಮುಖ ಕಾರಣವಾಗಿದೆ.