ನ್ಯೂಸ್ ನಾಟೌಟ್: ಅಶ್ಲೀಲ ವಿಡಿಯೋ ಹಾಗೂ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶೀಘ್ರವೇ ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಜೆಡಿಎಸ್ನ ಹಿರಿಯ ನಾಯಕ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿ ನಂತರ ಮಾತನಾಡಿದ ಅವರು, ಪ್ರಕರಣ ಸಂಬಂಧ ಈಗಾಗಲೇ ಕಾನೂನು ಚರ್ಚೆ ನಡೆಯುತ್ತಿದೆ. ಶೀಘ್ರವೇ ಪ್ರಜ್ವಲ್ ಶರಣಾಗುತ್ತಾರೆ ಎಂದು ಹೇಳಿದ್ದಾರೆ. ಅವರನ್ನು SIT ಬಂಧಿಸಿಲ್ಲ. ಜಾಮೀನು ಅರ್ಜಿ ತಿರಸ್ಕೃತಗೊಂಡ ನಂತರ ದೇವೇಗೌಡರ ಆಶೀರ್ವಾದ ಪಡೆದು ರೇವಣ್ಣ SIT ಮುಂದೆ ಹಾಜರಾದರು ಎಂದು ಹೇಳಿದ್ದಾರೆ. ರೇವಣ್ಣ SIT ತನಿಖೆಗೆ ಹಾಜರಾಗಿದ್ದಾರೆ. ಅವರೇ ಮಹಿಳೆಯನ್ನು ಅಪಹರಿಸಿದ್ದರಾ? ಅಥವಾ ಬೇರೆ ಯಾರಾದರೂ ಅಪಹರಣ ಮಾಡಿದ್ದಾರೆಂಬುದರ ಬಗ್ಗೆ ತನಿಖೆ ನಡೆಯಲಿದೆ. ಈ ಬಗ್ಗೆ ಮಹಿಳೆಯ ಮಗ ದೂರು ದಾಖಲಿಸಿದ್ದ. ಇದರ ಪ್ರಕಾರ ತನಿಖೆ ನಡೆಯಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಕಾನೂನು ಏನಿದೆಯೋ ಅದರ ಪ್ರಕಾರ ಅವರು ನಡೆದುಕೊಳ್ಳಲಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಹಾಗೂ ಜೆಡಿಎಸ್ ನಾಯಕರು ಚರ್ಚೆ ನಡೆಸಲಿದ್ದೇವೆ ಅಂತಾ ಹೇಳಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಂದೆ ಎಚ್.ಡಿ.ರೇವಣ್ಣ ಬಂಧನಕ್ಕೆ ಒಳಗಾದ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣರನ್ನು ಬಂಧಿಸಲು SIT ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.