ನ್ಯೂಸ್ ನಾಟೌಟ್: ಆದಾಯ ತೆರಿಗೆ (Income Tax) ಇಲಾಖೆ ನಾಸಿಕ್ ನಲ್ಲಿರುವ ಪ್ರಸಿದ್ಧ ಜುವೆಲ್ಲರಿ ಅಂಗಡಿ ಮೇಲೆ ದಾಳಿ ನಡೆಸಿದಾಗ ಅಧಿಕಾರಿಗಳಿದೆ ಅಚ್ಚರಿ ಕಾದಿತ್ತು.26 ಕೋಟಿ ರೂ. ನಗದು ಹಣ ಸಿಕ್ಕಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ ಸುರಾನಾ ಜ್ಯುವೆಲರ್ಸ್ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ. ಈ ವೇಳೆ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಲೆಕ್ಕಕ್ಕೆ ಸಿಗದ ಸಂಪತ್ತಿನ ದಾಖಲೆಗಳನ್ನು ವಶಪಡಿಸಿಕೊಂಡಿದೆ. ನಗದು ಹಣವನ್ನು ಹಲವು ಚೀಲಗಳಲ್ಲಿ ತುಂಬಿ ಇಡಲಾಗಿತ್ತು.