ನ್ಯೂಸ್ ನಾಟೌಟ್: ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮಾವೋವಾದಿಗಳು ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಹತರಾಗಿದ್ದಾರೆ. ಮಾವೋವಾದಿಗಳ ಗುಂಪಿನ ಕೆಲವು ಸದಸ್ಯರು ವಿಧ್ವಂಸಕ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದ ಭಮ್ರಗಡ ತಾಲೂಕಿನ ಕಟ್ರಂಗಟ್ಟ ಗ್ರಾಮದ ಬಳಿಯ ಅರಣ್ಯದಲ್ಲಿ ಮೊಕ್ಕಾಂ ಹೂಡಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಭದ್ರತಾ ಪಡೆ ದಾಳಿ ನಡೆಸಿದೆ.
ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯಲ್ಲಿದ್ದಾಗ ಮಾವೋವಾದಿಗಳು ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಸಿ-60 ಸಿಬ್ಬಂದಿ ಪ್ರತಿದಾಳಿ ನಡೆಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ. ಗುಂಡಿನ ದಾಳಿ ನಿಂತ ಬಳಿಕ ಸ್ಥಳದಿಂದ ಓರ್ವ ಪುರುಷ ಮತ್ತು ಇಬ್ಬರು ಮಹಿಳಾ ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರಲ್ಲಿ ಒಬ್ಬನನ್ನು ಪೆರಿಮಿಲಿ ದಳದ ಉಸ್ತುವಾರಿ ಮತ್ತು ಕಮಾಂಡರ್ ವಾಸು ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.