ನ್ಯೂಸ್ ನಾಟೌಟ್: ಬೋರ್ವೇಲ್ ಕೇಬಲ್ಗಳನ್ನು ಕದಿಯೋದಕ್ಕೆ ತಿಂಗಳ ಸಂಬಳಕ್ಕೆ ಕಳ್ಳನನ್ನು ನೇಮಿಸಿಕೊಂಡಿರುವ ವಿಚಿತ್ರ ಪ್ರಕರಣವೊಂದು ತುಮಕೂರಿನಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ಕಳ್ಳತನಕ್ಕಾಗಿಯೇ ಓರ್ವನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಎನ್ನಲಾಗಿದೆ. ವೆಂಕಟೇಶ್ ಕಳ್ಳತನ ಮಾಡುವ ರಾಘವೇಂದ್ರನಿಗೆ ತಿಂಗಳ ಲೆಕ್ಕದಲ್ಲಿ ಸಂಬಳ ಕೊಡುತ್ತಿದ್ದ.
ರಾಘವೇಂದ್ರ ತಿಂಗಳಿಗೆ 20 ಸಾವಿರ ರೂ. ಸಂಬಳ ಪಡೆಯುತ್ತಿದ್ದಾಗಿ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಈ ಖದೀಮರು ಗ್ರಾಮೀಣ ಭಾಗದಲ್ಲಿರುವ ಬೋರ್ವೇಲ್ ಕೇಬಲ್ ಕಳ್ಳತನ ಮಾಡುತ್ತಿದ್ದರು. ವಡ್ಡಗೆರೆ ಎಂಬಲ್ಲಿ ಇತ್ತೀಚೆಗೆ ಖತರ್ನಾಕ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಚಲನವಲನ ಗಮನಿಸಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಆ ಕೇಬಲ್ ಗಳನ್ನು ಖರೀದಿಸುತ್ತಿದ್ದಾತನೂ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.
Click 👇