ನ್ಯೂಸ್ ನಾಟೌಟ್: ಖಾಸಗಿ ಬಸ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ಸೋಮವಾರ(ಮೇ.13) ನಡೆದಿದೆ.
ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲಿಸಿದ್ದ ಬಸ್ಸನ್ನು ಹಿಂದಿಕ್ಕುವ ರಭಸದಲ್ಲಿ ಕಂಟೈನರ್ ಲಾರಿಯೊಂದು ಮುಂದೆ ಬರುತ್ತಿದ್ದ ಇನ್ನೊಂದು ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ಬಸ್ಸು ಚಾಲಕ ಹಾಗೂ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ಸಿನ ಮುಂಭಾಗ ನಜ್ಜು ಗುಜ್ಜಾಗಿದ್ದು, ಅದರ ನಡುವೆ ಸಿಲುಕಿದ್ದ ಚಾಲಕನನ್ನು ನಾಗರಿಕರು ಹರಸಾಹಸಪಟ್ಟು ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Click 👇