ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ವಿಡಿಯೋಗೆ ಪ್ರಧಾನಿ ಮೋದಿ ಮೆಚ್ಚುಗೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ಈ ಬಾರಿಯ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನದ ನಡೆಯುತ್ತಿದೆ, ಈ ವೇಳೆ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿವೃದ್ದಿಗೆ ಮತ ನೀಡಿ ಎಂದು ಹೇಳಿ, ಅಟಲ್ ಸೇತು ಕಾಮಗಾರಿಯ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದಾರೆ. ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮೋದಿ ಸಾಧನೆಯನ್ನು ಕೊಂಡಾಡಿದ್ದರು. ಇದೀಗ ರಶ್ಮಿಕಾ ಶೇರ್‌ ಮಾಡಿಕೊಂಡಿರುವ ಪೋಸ್ಟ್‌ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಅವರ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಶ್ಮಿಕಾ ಮಂದಣ್ಣ ಸೇತುವೆ ಕುರಿತು ʻʻದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ… ಪಶ್ಚಿಮ ಭಾರತದಿಂದ ಪೂರ್ವ ಭಾರತಕ್ಕೆ… ಜನರನ್ನು ಸಂಪರ್ಕಿಸುತ್ತಿದೆ, ಹೃದಯಗಳನ್ನು ಸಂಪರ್ಕಿಸುತ್ತಿದೆʼʼಎಂದು ವಿಡಿಯೊವನ್ನು ಎಕ್ಸ್‌ನಲ್ಲಿ ಶೇರ್‌ ಮಾಡಿಕೊಂಡಿದ್ದರು. ಇದೀಗ ಪ್ರಧಾನಿ ಮೋದಿ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿ, “ಖಂಡಿತವಾಗಿಯೂ! ಜನರನ್ನು ಸಂಪರ್ಕಿಸುವುದು ಮತ್ತು ಅವರ ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದು ಬೇರೇನೂ ಇಲ್ಲ.” ಮೋದಿ ಬರೆದುಕೊಂಡಿದ್ದಾರೆ. Click 👇