ನ್ಯೂಸ್ ನಾಟೌಟ್: ಕೆ.ಎಸ್.ಆರ್.ಟಿ.ಸಿ (KSRTC) ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ(ಮೇ.15)ಪುತ್ತೂರಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (23) ಎಂದು ಗುರುತಿಸಲಾಗಿದೆ.
ಪುರುಷರಕಟ್ಟೆಯಲ್ಲಿ ರೂಂ ಮಾಡಿಕೊಂಡು ಉಳಿದುಕೊಂಡಿದ್ದ ಮೋಕ್ಷಿತ್ ಸರ್ವಿಸ್ ಗೆ ಇಟ್ಟಿದ್ದ ತನ್ನ ಬೈಕನ್ನು ವಾಪಾಸು ತರುತ್ತಿದ್ದ ವೇಳೆ ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೋಕ್ಷಿತ್ ಗೌಡ ಪುರುಷರಕಟ್ಟೆಯಲ್ಲಿರುವ ಬಿಂದು ಫ್ಯಾಕ್ಟರಿಯಲ್ಲಿ ಸಿಫಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click 👇