ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಕಾರ್ಯಕ್ರಮ ಗುರುವಾರ (ಮೇ 30) ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಎನ್ ಡಬ್ಲ್ಯೂ ಸಿ ಕಾರ್ಗೋ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಎನ್ಎಂಸಿ ಯ ಹಿರಿಯ ವಿದ್ಯಾರ್ಥಿ ಲಕ್ಷ್ಮಿ ನಾರಾಯಣ ಸಿ.ಎಚ್. ಮಾತನಾಡಿ, ಬಡವರ್ಗದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರಿದು ಉನ್ನತಮಟ್ಟಕ್ಕೇರಬೇಕಾದರೆ ಎನ್ಎಂಸಿಯಂತಹ ಶಿಕ್ಷಣ ಸಂಸ್ಥೆಗಳು ಕಾರಣ ಎಂದು ತನ್ನ ಕಾಲೇಜಿನ ದಿನಗಳನ್ನು ಸ್ಮರಿಸಿದರು.
ಬಳಿಕ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎನ್ಎಂಪಿ ಯು ಪ್ರಾಂಶುಪಾಲೆ ಮಿಥಾಲಿ ರೈ, ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ.ಬಾಲಚಂದ್ರ ಗೌಡ ಪೇರಾಲು, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ವಿಶ್ವನಾಥ್ ಕೆ.ಟಿ., ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ನಿರ್ದೇಶಕಿ ಡಾ. ಮಮತಾ ಕೆ. ಹಾಗೂ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ಪ್ರಥಮ ಬಿಸಿಎ ವಿದ್ಯಾರ್ಥಿ ವೈಷ್ಣವಿ ಜಿ. ಕಾರ್ಯಕ್ರಮ ನಿರೂಪಿಸಿದರು.
Click 👇