ನ್ಯೂಸ್ ನಾಟೌಟ್: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆಯ ಇಮೇಲ್ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.
ಏಪ್ರಿಲ್ 29 ರಂದು ಇಮೇಲ್ ಸ್ವೀಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ.
ವಿಮಾನ ನಿಲ್ದಾಣದ ಮೂರು ಸ್ಥಳಗಳಲ್ಲಿ ಸ್ಫೋಟಕ ಸಾಧನಗಳನ್ನು ಇರಿಸಲಾಗಿದೆ ಎಂದು ಇಮೇಲ್ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ. ಇಮೇಲ್ನ ಮೂಲದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.