- +91 73497 60202
- [email protected]
- December 3, 2024 11:04 PM
ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿಕೊಟ್ಟ ಶಿಕ್ಷಕ..! ರಜಾಕ್ ಜೈಲುಪಾಲು..!
ನ್ಯೂಸ್ ನಾಟೌಟ್: ನರೇಂದ್ರ ಮೋದಿಗೆ (Narendra Modi) ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದ ಬಿಹಾರ ಶಾಲಾ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಹಾಕಲಾಗಿದೆ ಎಂದು ವರದಿ ತಿಳಿಸಿದೆ. ರಜಾಕ್ ಎಂಬಾತ ಜೈಲುಪಾಲಾದ ಶಿಕ್ಷಕ ಎನ್ನಲಾಗಿದ್ದು, ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ತಮ್ಮ ತರಗತಿಯ ಮಕ್ಕಳಿಗೆ ‘ಯಾರೂ ಮೋದಿಗೆ ಮತ ಹಾಕಬೇಡಿ’ ಎಂದು ಹೇಳಿದ್ದರು ಎನ್ನಲಾಗಿದೆ. ಹೀಗಾಗಿ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಉಚಿತ ಪಡಿತರ ಯೋಜನೆಯಡಿ ಮಾನವ ಬಳಕೆಗೆ ಯೋಗ್ಯವಲ್ಲದ ಆಹಾರ ಧಾನ್ಯಗಳನ್ನು ವಿತರಿಸುವುದರಿಂದ ಯಾರೂ ಮೋದಿಗೆ ಮತ ಹಾಕಬೇಡಿ ಎಂದು ಮಕ್ಕಳಿಗೆ ಶಿಕ್ಷಕ ಹೇಳುತ್ತಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳ ಕುಟುಂಬ ಸದಸ್ಯರು ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ಡಿಇಒ ತಿಳಿಸಿದ್ದಾರೆ. ಕುರ್ಹಾನಿ ಬ್ಲಾಕ್‌ನ ಅಮ್ರಾಖ್‌ನಲ್ಲಿರುವ ಸರ್ಕಾರಿ ಮಾಧ್ಯಮಿಕ ಶಾಲೆಯ ಹಲವಾರು ವಿದ್ಯಾರ್ಥಿಗಳ ಕುಟುಂಬ ಸದಸ್ಯರು ಶಿಕ್ಷಕ ಹರೇಂದ್ರ ರಜಾಕ್ ಅವರ ನಡವಳಿಕೆಯನ್ನು ತಮ್ಮ ಗಮನಕ್ಕೆ ತಂದಿದ್ದಾರೆ ಎಂದು ಡಿಇಒ ಅಜಯ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. ಜಿಲ್ಲಾ ಶಿಕ್ಷಣಾಧಿಕಾರಿ ಎಫ್‌ಐಆರ್ ದಾಖಲಿಸಿದ ನಂತರ, ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ