ನ್ಯೂಸ್ ನಾಟೌಟ್: ಮೇ3ರಂದು ಮಂಗಳೂರು ವಿವಿ ಜೀವ ಶಾಸ್ತ್ರ ಸ್ನಾತಕೋತ್ತರ ವಿಭಾಗ ವತಿಯಿಂದ ಆಯೋಜಿಸಲಾಗಿದ್ದ “ವರ್ಟೆಕ್ಸ್ 6.0” ರಾಷ್ಟ್ರ ಮಟ್ಟದ ಅಂತರ ಕಾಲೇಜು ವಿಜ್ಞಾನ ಉತ್ಸವದಲ್ಲಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು (NMC) ಸಮಗ್ರ ದ್ವಿತೀಯ ಪ್ರಶಸ್ತಿ ಬಾಚಿಕೊಂಡು ಬೀಗಿದೆ.
ಕಾಲೇಜಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಭಾಗಗಳನ್ನು ಒಳಗೊಂಡ 10 ವಿದ್ಯಾರ್ಥಿಗಳ ತಂಡ ಭಾಗವಹಿಸಿತ್ತು. ವಿಡಿಯೋಗ್ರಫಿ ಸ್ಪರ್ಧೆಯಲ್ಲಿ ಸುಕನ್ಯಾ ಡಿ ಯು ಪ್ರಥಮ ಸ್ಥಾನ ಪಡೆದುಕೊಂಡರು. ರಸಪ್ರಶ್ನೆ ಸ್ಪರ್ಧೆಯಲ್ಲಿ ಅನುಶ್ರೀ ಮತ್ತು ಚೈತ್ರ ದ್ವಿತೀಯ ಸ್ಥಾನ ಪಡೆದರು. ಡಮ್ ಶರಡ್ಸ್ ಸ್ಪರ್ಧೆಯಲ್ಲಿ ಮಹಿಮಾ ಮತ್ತು ಮಧಿವಧಿನಿ ದ್ವಿತೀಯ ಬಹುಮಾನ ಪಡೆದುಕೊಂಡರು. ಯಶಿಕಾ, ತೇಜಸ್, ಅಕ್ಷತಾ ಮತ್ತು ಮನಸ್ವಿನಿ ಕಿರುನಾಟಕದಲ್ಲಿ ಪ್ರಥಮ ಬಹುಮಾನದೊಂದಿಗೆ ಸಮಗ್ರ ದ್ವಿತೀಯ ಪ್ರಶಸ್ತಿ ಗೆದ್ದುಕೊಂಡರು. ಕಾಲೇಜಿನ ಪ್ರಾಣಿಶಾಸ್ತ್ರ ಉಪನ್ಯಾಸಕ ಅಜಿತ್ ಕುಮಾರ್ ಎಸ್ ಬಿ ತಂಡದ ನೇತೃತ್ವ ವಹಿಸಿದ್ದರು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಕುಲದೀಪ್ ಪಿ ಪಿ, ಸಸ್ಯಶಾಸ್ತ್ರ ಉಪನ್ಯಾಸಕಿ ಕೃತಿಕಾ ಕೆ.ಜೆ, ರಸಾಯನಶಾಸ್ತ್ರ ಉಪನ್ಯಾಸಕಿ ಪಲ್ಲವಿ ಬಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಜ್ಞಾನ ಪದವಿ ವಿಭಾಗದ ಸಂಯೋಜಕ ಸತ್ಯಪ್ರಕಾಶ್ ಡಿ ಮತ್ತು ಕಾಲೇಜಿನ ಉಪನ್ಯಾಸಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.