ನ್ಯೂಸ್ ನಾಟೌಟ್: ಅಶ್ಲೀಲ ವಿಡಿಯೋ ಪ್ರಕರಣಗಳಲ್ಲಿ ಸಿಕ್ಕಿ ಹಾಕಿಕೊಂಡು ತಲೆ ಮರೆಸಿಕೊಂಡಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ (Prajwal Revanna) ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿಶೇಷ ತನಿಖಾ ದಳ (SIT) ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಜರ್ಮನಿಯಿಂದ ಲಂಡನ್ ಗೆ ತೆರಳಿದ್ದಾರೆ ಅನ್ನುವ ಮಾಹಿತಿ ಸಿಕ್ಕಿದೆ.
ಸದ್ಯ ಇಂಗ್ಲೆಂಡ್ ನಲ್ಲಿರುವ ಭಾರತೀಯ ಉದ್ಯಮಿಯ ಸಹಾಯ ಪಡೆದುಕೊಂಡು ಪ್ರಜ್ವಲ್ ರೇವಣ್ಣ ಮತ್ತು ಅವರ ಇಬ್ಬರು ಗೆಳೆಯರು ರೈಲು ಮೂಲಕ ಜರ್ಮನಿಯ ಮ್ಯೂನಿಚ್ ಮೂಲಕ ಲಂಡನ್ ಗೆ ತೆರಳಿದ್ದಾರೆ ಎನ್ನಲಾಗಿದೆ. ಸದ್ಯ ದುಬೈ ಮೂಲದ ಓರ್ವ ಹಾಗೂ ಬೆಂಗಳೂರು ಮೂಲದ ಸ್ನೇಹಿತರು ಪ್ರಜ್ವಲ್ ಜೊತೆಗಿದ್ದಾರೆ ಎಂದು ತಿಳಿದು ಬಂದಿದೆ. ಇವರಿಬ್ಬರೂ ಕೂಡ ಪ್ರಜ್ವಲ್ ಜೊತೆ ಹೋಗಿದ್ದಾರೆ ಎನ್ನಲಾಗುತ್ತಿದೆ.
ಪದೇ..ಪದೇ ವಿಮಾನ ಟಿಕೆಟ್ ಕ್ಯಾನ್ಸಲ್
ಪ್ರಜ್ವಲ್ ರೇವಣ್ಣ ಈಗಾಗಲೇ ಎರಡು ಸಲ ವಿಮಾನ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ನಂತರ ಪ್ರಜ್ವಲ್ ಭಾರತಕ್ಕೆ ಬರಬಹುದು ಎಂದು ಹೇಳಲಾಗಿತ್ತು. ಸದ್ಯ ಪ್ರಜ್ವಲ್ ಕುಟುಂಬಸ್ಥರಿಂದಲೇ ವಾಪಸ್ ದೇಶಕ್ಕೆ ಬರಬೇಕು ಅನ್ನುವ ಒತ್ತಡ ಹೆಚ್ಚಾಗುತ್ತಿದೆ.
ಪ್ರಜ್ವಲ್ ರೇವಣ್ಣ ತಲೆ ಮರೆಸಿಕೊಂಡಿರುವುದನ್ನು ನೋಡಿದ್ರೆ ಈತ ಲೈಂಗಿಕ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡು ಭಾರತ ಬಿಟ್ಟು ಕೈಲಾಸ ದೇಶಕ್ಕೆ ಪರಾರಿಯಾದ ಸ್ವಾಮಿ ನಿತ್ಯಾನಂದನ ಹಾದಿ ಹಿಡಿಯುವನೇ ಅನ್ನುವ ಅನುಮಾನಗಳನ್ನು ಸಾಮಾಜಿಕ ಜಾಲತಾಣದಲ್ಲಿ ಜನರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.