ನ್ಯೂಸ್ ನಾಟೌಟ್: ಅಪ್ರಾಪ್ತೆ ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ತನ್ನ ತಂದೆ ಮತ್ತು ಅಜ್ಜಿಯೊಂದಿಗೆ ಮುಂಬೈನ ಉಪನಗರ ಪ್ರದೇಶದಲ್ಲಿ ವಾಸಿಸುತ್ತಿದ್ದಳು.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಆಕೆಯನ್ನು ತಪಾಸಣೆಗಾಗಿ ಬಾಂದ್ರಾದ ಬಾಬಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ನಡೆಸಿದಾಗ ಆಕೆ ಗರ್ಭಿಣಿ ಎಂಬುದು ಗೊತ್ತಾಯಿತು. ಗರ್ಭಧಾರಣೆಯ ಬಗ್ಗೆ ಪ್ರಶ್ನಿಸಿದಾಗ, ತನ್ನ ತಂದೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹುಡುಗಿ ಬಹಿರಂಗಪಡಿಸಿದ್ದಾಳೆ. ಬಾಲಕಿಯ ತಂದೆ ಈ ಹಿಂದೆಯೂ ಕಳ್ಳತನ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಕ್ರಿಮಿನಲ್ ಇತಿಹಾಸವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ತಂದೆ ನವೆಂಬರ್ 2023 ರಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದು, ಅಂದಿನಿಂದ ಪ್ರತಿದಿನ ಬಾಲಕಿಯ ಮೇಲೆ ಅತ್ಯಾಚಾರ ಮಾಡುತ್ತಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ. ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸರು ತಂದೆಯ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
Click 👇