ನ್ಯೂಸ್ ನಾಟೌಟ್: ರಾಜ್ಯ ರಾಜಕೀಯದಲ್ಲಿ ಅತೀವ ಕೋಲಾಹಲ ಸೃಷ್ಟಿಸಿರುವ ಹಾಸನದ ಪೆನ್ಡ್ರೈವ್ ಪ್ರಕರಣದ ವಿಡಿಯೋದಲ್ಲಿರುವ ಪ್ರಧಾನ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಸದ್ಯ ಅವರು ಜರ್ಮನಿಯ ಫ್ರಾಂಕ್ಫರ್ಟ್ನಲ್ಲಿದ್ದಾರೆ ಎನ್ನಲಾಗಿದೆ. ಲುಪ್ತಾನ್ಸಾ ಏರ್ಲೈನ್ಸ್ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್ಪೋರ್ಟ್ಗೆ ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್ ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್ ವೀಸಾವನ್ನು ಪ್ರಜ್ವಲ್ ಹೊಂದಿದ್ದಾರೆ.
ಟೂರಿಸ್ಟ್ ವೀಸಾದಲ್ಲಿ ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್ ಪ್ರಕಾರ, ಅವರು ನೋಟೀಸ್ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ. ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಇಂದು(ಮೇ.1) ಬೆಳಗ್ಗೆ ಹೇಳಿದ್ದಾರೆ.