ನ್ಯೂಸ್ ನಾಟೌಟ್: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಹರಿಬಿಟ್ಟವರನ್ನು ಇಂದು(ಮೇ.28) ಬಂಧಿಸಿದೆ ಎಂದು ವರದಿ ತಿಳಿಸಿದೆ. ಹೈಕೋರ್ಟ್ಗೆ ಬಂದಿದ್ದ ಆರೋಪಿಗಳಾದ ನವೀನ್ ಗೌಡ, ಚೇತನ್ನನ್ನು ಎಸ್ಐಟಿ ಬಂಧಿಸಿದೆ. ವಿಡಿಯೋ ವೈರಲ್ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು.
ಇದರಲ್ಲಿ ಕಾಂಗ್ರೆಸ್ ನಾಯಕರುಗಳ ಜೊತೆ ಗುರುತಿಸಿಕೊಂಡವರನ್ನು ಬಂಧಿಸಲಾಗಿಲ್ಲ ಎಂದು ಆರೋಪಿಸಲಾಗಿತ್ತು. ಈಗ ಸಚಿವ ಜಮೀರ್ ಅಹಮ್ಮದ್ ಆಪ್ತ ಎನ್ನಲಾದ ವ್ಯಕ್ತಿಯನ್ನು ವಿಡಿಯೋ ಹಂಚಿಕೆ ಆರೋಪದ ಮೇಲೆ ಬಂಧಿಸಲಾಗಿದೆ.. ಪ್ರಜ್ವಲ್ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್ ಗೌಡ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾಗಿರುವ ಈ ವಿಡಿಯೋವನ್ನ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ವೈರಲ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಈ ನವೀನ್ ಗೌಡ ಪ್ರಭಾವಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್ ಜತೆಗೆ ನವೀನ್ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈಗ ಬಂಧನವಾಗಿದ್ದು ಈ ಪ್ರಕರಣಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.
Click 👇