ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ಕೂಡ ವಶಕ್ಕೆ..! ಏನಿದು ಎಸ್.ಐ.ಟಿ ತನಿಖೆ..?

ನ್ಯೂಸ್ ನಾಟೌಟ್: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಇತ್ತೀಚೆಗೆ ವಿದೇಶದಿಂದ ವಿಡಿಯೋ ಮೂಲಕ ಮೇ.21 ರಂದು ಬೆಂಗಳೂರಿಗೆ ಮರಳಿ ಹೇಳಿದ ಬಳಿಕ ತನಿಖೆ ಮತ್ತಷ್ಟು ಚುರುಕುಕೊಂಡಿದೆ. ಪ್ರಜ್ವಲ್ ರೇವಣ್ಣ ವಿಚಾರಣೆ ವೇಳೆ ಮಹತ್ವದ ದಾಖಲೆ ಸಂಗ್ರಹಿಸುತ್ತಿದ್ದು, ಹಾಸನದ ಆರ್ ಸಿ ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಅವರ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದು ಬೆಂಗಳೂರಿಗೆ ತೆಗೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಹಾಸನದ ಅಮಾನತುಗೊಂಡಿರುವ ಜೆಡಿಎಸ್ ಸಂಸದರ ನಿವಾಸದಲ್ಲಿ ಮಂಗಳವಾರ ಮಧ್ಯಾಹ್ನ ಎಸ್.ಐ.ಟಿ ಹಾಗೂ ಎಫ್.ಎಸ್.ಎಲ್ ತಂಡ ಆರಂಭಿಸಿದ್ದ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮುಕ್ತಾಯವಾಗಿದೆ. ಸತತ ಹತ್ತು ಗಂಟೆಗಳ ಕಾಲ ಪರಿಶೀಲನೆ ನಡೆಸಿದೆ.