ನ್ಯೂಸ್ ನಾಟೌಟ್: ದೋಸೆ ಸೇರಿದಂತೆ ಆಹಾರ ಪದಾರ್ಥಗಳನ್ನು ತಯಾರಿ ಮಾಡುವ ಮತ್ತು ದಕ್ಷಿಣ ಭಾರತದ ಉಪಾಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆಯ ತೆಲಂಗಾಣದ ಶಾಖೆಗೆ ಮೇಲೆ ಹೈದರಾಬಾದ್ನ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಗುರುವಾರ(ಮೇ.23) ರೆಸ್ಟೋರೆಂಟ್ ಅವಧಿ ಮೀರಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಕಂಡುಬಂದಿದ್ದರಿಂದ ಅನೇಕ ಉಲ್ಲಂಘನೆಗಳನ್ನು ಕಂಡುಕೊಂಡಿದ್ದಾರೆ. ರಾಮೇಶ್ವರಂ ಕೆಫೆ ಕೆಲವು ತಿಂಗಳ ಹಿಂದೆ ಬೆಂಗಳೂರಿನ ವೈಟ್ಫೀಲ್ಡ್ ಶಾಖೆಯ ಮೇಲೆ ಬಾಂಬ್ ದಾಳಿ ನಡೆದ ಬಳಿಕ ಭಾರೀ ಸುದ್ದಿಯಾಗಿತ್ತು.
ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ, 16,000 ರೂ ಮೌಲ್ಯದ 100 ಕೆಜಿ ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮೀರಿ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. 450 ಕೆ.ಜಿ ಹಸಿ ಅಕ್ಕಿ, 300 ಕೆಜಿ ಲೇಬಲ್ ಮಾಡದ ಬೆಲ್ಲವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಏತನ್ಮಧ್ಯೆ, ಆಹಾರ ತಯಾರಿಸುವವರಿಗೆ ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರವನ್ನು ಸಲ್ಲಿಸಲಾಗಿಲ್ಲ ಮತ್ತು ರಾಮೇಶ್ವರಂ ಕೆಫೆಯಲ್ಲಿ ಕಸದ ಬುಟ್ಟಿಗಳನ್ನು ಮುಚ್ಚಳಗಳಿಂದ ಮುಚ್ಚಲಾಗಿಲ್ಲ ಎಂದು ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕಳಪೆ ಆಹಾರ ಪೂರೈಕೆ ವಿಷಯದಲ್ಲಿ ಹೈದರಾಬಾದ್ ನಲ್ಲಿ ಹಲವು ದೂರುಗಳು ಬರುತ್ತಿರುವುದರಿಂದ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹೈದರಾಬಾದ್ನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸುತ್ತಿದ್ದಾರೆ.
Click 👇