ನ್ಯೂಸ್ ನಾಟೌಟ್: ವೀಡಿಯೋ ಪ್ರಕರಣದಲ್ಲಿ ಎ1 ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna)ಸದ್ಯ ಸಂಕಷ್ಟದಿಂದ ಪಾರಾಗಲು ದೇವರ ಮೊರೆ ಹೋಗಿದ್ದಾರೆ ಎನ್ನಲಾಗಿದೆ ಹೊಳೆನರಸೀಪುರದ ತಮ್ಮ ಮನೆಯಲ್ಲಿ ಅಗ್ನಿಕುಂಡ ನಿರ್ಮಿಸಿ ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಬೆಳ್ಳಂ ಬೆಳಗ್ಗೆಯೇ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮಾಜಿ ಸಚಿವ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಎಲ್ಲ ಸಂಕಷ್ಟಗಳು ದೂರವಾಗಲೆಂದು ಮೆನಯಲ್ಲೇ ಅಗ್ನಿಕುಂಡ ನಿರ್ಮಿಸಿ ಹೋಮ ನೆರವೇರಿಸಿದ್ದಾರೆ.
ನಂತರ ಬೆಂಗಳೂರಿಗೆ ತೆರಳಿದ್ದಾರೆ ಎಂದು ವರದಿ ತಿಳಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದೆ. ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆಯೇ ವಿರುದ್ಧ ದೂರು ದಾಖಲಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ಮತ್ತು ಹೆಚ್ಡಿ ರೇವಣ್ಣ ಇಬ್ಬರ ವಿರುದ್ಧವೂ ದೂರು ದಾಖಲಾಗಿದೆ. ದೂರಿನ ಆಧಾರದಲ್ಲಿ ಎಫ್ಐಆರ್ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ. 354 A, 354 D, 509 ಅಡಿ ಪ್ರಕರಣ ದಾಖಲಾಗಿದೆ. 2015 ರಲ್ಲಿ ಹೆಚ್.ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ನೀಡಿದ್ದಾರೆ. ತಂದೆ ಮತ್ತು ಮಗನ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲ್ಲಿ ಪ್ರಕರಣದ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡ ಇಬ್ಬರಿಗೂ ನೋಟಿಸ್ ಜಾರಿಗೊಳಿಸಿದೆ.