ನ್ಯೂಸ್ ನಾಟೌಟ್: ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲೂ ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಉದಯಕೃಷ್ಣ. ಬಿ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಫರೆನ್ಸಿಕ್ ಮೆಡಿಸಿನ್ ವಿಭಾಗದ ಪ್ರಾಧ್ಯಾಪಕ ಡಾ.ಅವಿನಾಶ್ ಕೆ.ವಿ. ಆಗಮಿಸಿದ್ದರು.
ಈ ವೇಳೆ ಮಾತನಾಡಿದ ಅವರು, ತಂಬಾಕು ಮತ್ತು ಧೂಮಪಾನದ ದುಷ್ಪರಿಣಾಮಗಳನ್ನು ವಿವರಿಸಿದರು. ತಂಬಾಕು ಸೇವನೆ ಅನಾರೋಗ್ಯಕ್ಕೆ ಮೂಲ ಎಂದು ತಿಳಿಸಿದರು. ಕಾನೂನು ನೆರವು ಸಮಿತಿಯ ಸಂಯೋಜಕಿ ನಯನಾ. ಪಿ.ಯು, ಎನ್.ಎನ್.ಎಸ್ ಘಟಕದ ಸಂಯೋಜನಾಧಿಕಾರಿ ಕಲಾವತಿ. ಎಂ ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಅಂಜಲಿ, ಕವನ ಹಾಗೂ ಲಾವಣ್ಯ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಆಗ್ನಾ ಕಾರ್ಯಕ್ರಮ ನಿರೂಪಿಸಿದರು. ಅಕ್ಷರ ಬಾಬು ಸ್ವಾಗತಿಸಿ, ಶೃತಿ ರಾಧಕೃಷ್ಣನ್ ವಂದಿಸಿದರು. ವಿಶ್ವ ತಂಬಾಕು ರಹಿತ ದಿನವನ್ನು ಪ್ರಪಂಚದಾದ್ಯಂತ ಪ್ರತಿ ವರ್ಷ ಮೇ 31 ರಂದು ಆಚರಿಸಲಾಗುತ್ತದೆ ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಮತ್ತು ಅದರ ಉತ್ಪನ್ನದ ಸೇವನೆಯಿಂದ ಉಂಟಾಗುವ ಅಪಾಯ ಮತ್ತು ಕುಟುಂಬ, ಸಮಾಜ ಮತ್ತು ಪರಿಸರದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ತಂಬಾಕು ರಹಿತ ದಿನವನ್ನು ಆಯೋಜಿಸುತ್ತದೆ.
Click 👇