- +91 73497 60202
- [email protected]
- November 22, 2024 1:15 PM
ನ್ಯೂಸ್ ನಾಟೌಟ್: ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ, ಬಳಿಕ ಮಹಿಳಾ ಪೊಲೀಸ್ ಅಧಿಕಾರಿಗಳ ಜೊತೆ ಪೊಲೀಸ್ ವಾಹನದಲ್ಲಿ ಕಳುಹಿಸಿದ್ದು ವಿಶೇಷವಾಗಿತ್ತು. ದೇಶ ಬಿಟ್ಟು ಪರಾರಿಯಾದ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ರಾಜ್ಯದಲ್ಲಿ ಏಪ್ರಿಲ್ 26ರಂದು ನಡೆದ ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಬಳಿಕ ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದರು. ಇದೀಗ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದಿರುವ ಎಸ್ಐಟಿ ಪೊಲೀಸರು ಎಸ್ಐಟಿ ಕಚೇರಿಗೆ ಕರೆತಂದಿದ್ದಾರೆ. ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು ಇಂದು(ಮೇ.31) ಬೆಳಗ್ಗೆ ಆರೋಗ್ಯ ತಪಾಸಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ೧೪ದಿನ ಪೊಲೀಸ್ ಕಸ್ಟಡಿಗೆ ಕೇಳಲಿದ್ದಾರೆ ಎನ್ನಲಾಗದೆ. ಜೀಪ್ ಚಾಲಕ ಹೊರತು ಪಡಿಸಿದರೆ ಉಳಿದವರೆಲ್ಲಾ ಮಹಿಳಾ ಅಧಿಕಾರಿಗಳು, ಸಂಸದನ ಬಂಧನ ಸಂದರ್ಭದಲ್ಲಿದ್ದರು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಮುಜುಗರ ಉಂಟುಮಾಡುವ ನಿಟ್ಟಿನಲ್ಲಿ ಬಂಧನವಾಗಿದೆ ಎಂದು ಮೂಲಗಳು ತಿಳಿಸಿವೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ