ನ್ಯೂಸ್ ನಾಟೌಟ್ : ಏಳು ಹಂತಗಳ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು(ಮೇ.7) ನಡೆಯುತ್ತಿದೆ. ಗುಜರಾತ್ನ ನಾಡಿಯಾಡ್ನ ಮತಗಟ್ಟೆಯಲ್ಲಿ ಯುವಕನೊಬ್ಬ ಮತದಾನ ಮಾಡಲು ಆಗಮಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಯುವಕ ಅಂಕಿತ್ ಸೋನಿ ಎಂಬವರು ಮಂಗಳವಾರ(ಮೇ.7) ನಡೆದ ಮೂರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಗುಜರಾತ್ನ ನಾಡಿಯಾಡ್ನ ಮತಗಟ್ಟೆಯಲ್ಲಿ ಕಾಲುಗಳ ಮೂಲಕ ತಮ್ಮ ಹಕ್ಕು ಚಲಾಯಿಸಿದರು.
ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, 20 ವರ್ಷಗಳ ಹಿಂದೆ ಎಲೆಕ್ಟ್ರಿಕ್ ಶಾಕ್ ನಿಂದ ನನ್ನ ಎರಡೂ ಕೈಗಳನ್ನು ಕಳೆದುಕೊಂಡೆ. ನನ್ನ ಗುರುಗಳು ಮತ್ತು ಶಿಕ್ಷಕರ ಆಶೀರ್ವಾದದಿಂದ ನಾನು ಚಿತ್ರ ಬಿಡಿಸಲು ಪ್ರಾರಂಭಿಸಿದೆ. ನಂತರ ಬರೆಯಲು ಪ್ರಾರಂಭಿಸಿದೆ. ಇದಾದ ಬಳಿಕ ನಾನು ಶಾಲೆಗೆ ಹೋಗಲು ಪ್ರಾರಂಭಿಸಿದೆ. ನಾನು ಶಾಲೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣನಾಗಿದ್ದೆ. ಜೊತೆಗೆ ಕಂಪ್ಯೂಟರ್ ಸೈನ್ಸ್ ಕೋರ್ಸ್ ಮಾಡಿ MBA ಮಾಡಿದೆ. ಕಳೆದ ಹಲವು ವರ್ಷಗಳಿಂದ ನಾನು ಹೀಗೆಯೇ ಮತ ಚಲಾಯಿಸುತ್ತಿದ್ದೇನೆ ಎಂದಿದ್ದಾರೆ.