ನ್ಯೂಸ್ ನಾಟೌಟ್: ಹಾಸನದ ಹಾಲಿ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಎಸ್ಐಟಿ ತನಿಖೆ ಚುಕುರುಗೊಂಡಿದ್ದು, ಪ್ರಕರಣ ಸಂಬಂಧಿಸಿದವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗುತ್ತಿದೆ. ಈ ಬೆನ್ನಲ್ಲೇ ಪ್ರಜ್ವಲ್ ವಿಡಿಯೋ ನೀಡಿದ್ದು ನಾನೇ ಎಂದು ವಿಡಿಯೋ ಮೂಲಕ ಹೇಳಿದ್ದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಇದೀಗ ನಾಪತ್ತೆ ಆಗಿದ್ದಾರೆ ಎನ್ನಲಾಗಿದೆ. ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದ ಕಾರ್ತಿಕ್, ನಾನು ಪ್ರಕರಣ ಸಂಬಂಧ ಎಸ್ಐಟಿ ತನಿಖೆಗೆ ಹಾಜರಾಗುತ್ತೇನೆ, ಹೇಳಿಕೆ ನೀಡುತ್ತೇನೆ ಎಂದು ಹೇಳಿದ್ದಾರೆ. ಆದರೆ ಇದೀಗ ದಿಢೀರ್ ಕಾರ್ತಿಕ್ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಹರಿದಾಡುತ್ತಿದೆ.
ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿಯಾಗಿರುವ ಕಾರ್ತಿಕ್, ಪ್ರಜ್ವಲ್ ರೇವಣ್ಣ ಬಳಿ 15 ವರ್ಷ ಕಾರು ಚಾಲಕನಾಗಿ ಕೆಲಸ ಮಾಡಿದ್ದರು. ಬಳಿಕ ಪರಸ್ಪರ ಮನಸ್ತಾಪದಿಂದ ಕಾರ್ತಿಕ್ ಕೆಲಸ ತೊರೆದು ದೂರಾಗಿದ್ದರು ಎನ್ನಲಾಗಿದೆ. ಎರಡು ದಿನಗಳ ಹಿಂದೆ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದ ಕಾರ್ತಿಕ್, ನಾನು ಹದಿನೈದು ವರ್ಷದಿಂದ ಪ್ರಜ್ವಲ್ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು ಹಲ್ಲೆ ಮಾಡಿದರು ಆದ್ದರಿಂದ ಅವರ ಮನೆಯಿಂದ ಹೊರಬಂದೆ ಎಂದಿದ್ದರು.
ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ಧ ಪ್ರಜ್ವಲ್ ರೇವಣ್ಣ ಸ್ಟೇ ತರುತ್ತಾರೆ. ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್, ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ದರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ ಎಂದಿದ್ದರು. ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ. ಕಾಂಗ್ರೆಸ್ನವರಿಗಂತೂ ನಾನು ವಿಡಿಯೋ ಕೊಟ್ಟಿಲ್ಲ. ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೇ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್ಡ್ರೈವ್ ಯಾರು ಹಂಚಿದರೂ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಎಸ್ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿ ಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲಾ ವಿವರವಾಗಿ ಹೇಳುತ್ತೇನೆ ಎಂದು ವಿಡಿಯೋ ಮೂಲಕ ಕಾರ್ತಿಕ್ ಹೇಳಿದ್ದರು. ಆದರೆ ಈಗ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.