ವಿಶ್ವಕಪ್‌ ನಲ್ಲಿ ಕೆಎಂಎಫ್‌ ಹವಾ..! ಸ್ಕಾಟ್ಲೆಂಡ್, ಐರ್ಲೆಂಡ್ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಾಯೋಜಕತ್ವ..! ಸಿಎಂ ಹೇಳಿದ್ದೇನು..?

ನ್ಯೂಸ್ ನಾಟೌಟ್: ರಾಜ್ಯದ ಕೆಎಂಎಫ್‌ ನಂದಿನಿ ವಿಶ್ವಕಪ್‌ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ವಿಶ್ವಕ್ಕೆ ರಾಜ್ಯದ ರೈತರ ಶ್ರಮ ಪರಿಚಯವಾಗುತ್ತಿದೆ ಎಂದಿದ್ದಾರೆ. ಸ್ಕಾಟ್ಲೆಂಡ್ ಪುರುಷರ ಪ್ಲೇಯಿಂಗ್ ಶರ್ಟ್‌ಗಳ ಎಡ ತೋಳಿನ ಮೇಲೆ ನಂದಿನಿ ಲೋಗೋ ಇರುತ್ತದೆ. ಲೋಗೋದಲ್ಲಿ ‘ನಂದಿನಿ’ ಎಂದು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಬರೆಯಲಾಗಿದೆ. ಪ್ರತಿ ತಂಡಕ್ಕೆ ಪ್ರಾಯೋಜಕತ್ವದ ಮೊತ್ತ ಸುಮಾರು 2.5 ಕೋಟಿ ರೂಪಾಯಿ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ. ಈ ಬಗ್ಗೆ ಟ್ವೀಟ್‌ ಮಾಡಿದ ಸಿಎಂ ಸಿದ್ದರಾಮಯ್ಯ, “ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ ಟಿ 20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ ” ಎಂದಿದ್ದಾರೆ. ” ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ” ಎಂದು ಟ್ವೀಟ್‌ನಲ್ಲಿ ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ. Click 👇