ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ವೇಗವಾಗಿ ಸಾಗುತ್ತಿದೆ. ಕರ್ನಾಟಕದ ಕೋಲಾರದಲ್ಲಿ ಜೆಡಿಎಸ್ ಮೊದಲ ಖಾತೆ ತೆಗೆದಿದ್ದು, ಒಟ್ಟು 543 ಕ್ಷೇತ್ರಗಳ ಪೈಕಿ ಎನ್ಡಿಎ ಮೈತ್ರಿಕೂಟವು (NDA) 294 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮಧ್ಯೆಯೇ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಬಿಜೆಪಿಗೆ ಮೊದಲ ಗೆಲುವು ತಂದುಕೊಟ್ಟಿದ್ದಾರೆ.
ಅಮಿತ್ ಶಾ ಅವರು ಗುಜರಾತ್ನ ಗಾಂಧಿನಗರ ಲೋಕಸಭೆ ಕ್ಷೇತ್ರದಲ್ಲಿ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. 2019 ರಲ್ಲಿಯೂ ಅಮಿತ್ ಶಾ ಅವರು ಗಾಂಧಿನಗರದಲ್ಲಿ 5.57 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈಗಲೂ ಅವರು ಇಷ್ಟೇ ಮತಗಳ ಅಂತರದಿಂದ ಗೆದ್ದಿದ್ದಾರೆ. ಬಿಜೆಪಿಯ ಭದ್ರಕೋಟೆಯಾಗಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ್, ರಾಜಸ್ಥಾನ್ ರಾಜ್ಯಗಳಲ್ಲಿ ಹಿನ್ನಡೆ ಉಂಟಾಗಿದೆ.
Click 👇