ನ್ಯೂಸ್ ನಾಟೌಟ್: ಆಯೋಧ್ಯೆ ರಾಮ ಮಂದಿರಕ್ಕೆ ಇದೀಗ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ. ಭಾರಿ ಬೆದರಿಕೆಗಳ ಕಾರಣ ಆಯೋಧ್ಯೆಯಲ್ಲಿ ಭಾರಿ ಭದ್ರತೆಯನ್ನೂ ನಿಯೋಜಿಸಲಾಗಿದೆ. ಹೀಗೆ ಭದ್ರತೆಗಾಗಿ ನಿಯೋಜನೆಗೊಂಡ ಪ್ಯಾರಾ ಮಿಲಿಟರಿ ಯೋಧ ತನ್ನದೇ ಗುಂಡಿಗೆ ಬಲಿಯಾಗಿದ್ದಾನೆ ಎಂದು ವರದಿ ತಿಳಿಸಿದೆ.
ಅಚಾನಕ್ಕಾಗಿ ಸಿಡಿದ ಗುಂಡಿನಿಂದ ಯೋಧ ಮೃತಪಟ್ಟಿದ್ದಾನೆ. ಅಂಬೇಡ್ಕರ್ ನಗರ ನಿವಾಸಿಯಾಗಿರುವ ಪ್ಯಾರಾ ಮಿಲಿಟರಿ ಯೋಧ ಶುತ್ರುಘ್ನ ವಿಶ್ವಕರ್ಮ, ರಾಮ ಜನ್ಮ ಭೂಮಿಯಲ್ಲಿ ಭದ್ರತಾ ಕಾರ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶಸಸ್ತ್ರ ಸೀಮಾ ಬಲ್(SSF) ಅನ್ನೋ ರಾಮ ಮಂದಿರ ಭದ್ರತಾ ಪಡೆಯ ಸಿಬ್ಬಂದಿಯಾಗಿದ್ದ ಶತ್ರುಘ್ನ ಇಂದು(ಜೂ.19) ರಾಮ ಮಂದಿರ ಆವರಣದಲ್ಲಿ ಕರ್ತವ್ಯದಲ್ಲಿ ನಿರತರಾಗಿದ್ದರು. ಈ ವೇಳೆ ತನ್ನಲ್ಲಿದ್ದ ಶಸ್ತ್ರಾಸ್ತ್ರ ಪರಿಶೀಲಿಸುತ್ತಿದ್ದ ವೇಳೆ ಅಚಾನಕ್ಕಾಗಿ ಗುಂಡು ಸಿಡಿದಿದೆ ಎನ್ನಲಾಗಿದೆ.
ಅಚಾನಕ್ಕಾಗಿ ಸಿಡಿದ ಗುಂಡಿನಿಂದ ಯೋಧ ತೀವ್ರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಇತರ ಸಿಬ್ಬಂದಿಗಳು ರಾಮ ಮಂದಿರದಲ್ಲಿನ ಆ್ಯಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗಾಯದ ಪ್ರಮಾಣ ಹೆಚ್ಚಾಗಿದ್ದರಿಂದ ಹಾಗೂ ತೀವ್ರ ರಕ್ತಸ್ರವಾದಿಂದ ಬಳಲಿದ ಯೋಧ ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
Click 👇