ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ನಿಷೇಧ ಹೇರಿದ ಕರ್ನಾಟಕ ಸರ್ಕಾರ..! ಸರ್ಕಾರದ ಆದೇಶ ಪ್ರತಿಯಲ್ಲೇನಿದೆ..?

ನ್ಯೂಸ್ ನಾಟೌಟ್ : ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಸರ್ಕಾರವು ರಾಜ್ಯದಲ್ಲಿ ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆ ಮತ್ತು ಪ್ರಸಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಶುಕ್ರವಾರ (ಜೂ.7) ಬಿಡುಗಡೆಯಾಗಬೇಕಿದ್ದ ʻಹಮಾರೆ ಬಾರಹ್‌ʼ (Hamare Baarah) ಚಿತ್ರವನ್ನು ಈಗಾಗಲೇ ಹಲವು ರಾಜ್ಯಗಳಲ್ಲಿ ನಿಷೇಧಿಸಲಾಗಿದೆ ಎಂದು ವರದಿ ತಿಳಿಸಿದೆ. ಸಿನಿಮಾ ಟ್ರೈಲರ್‌ನಲ್ಲಿಯೇ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವಂತಹ ಅಂಶಗಳಿವೆ. ಆದ್ದರಿಂದ ಚಿತ್ರ ಬಿಡುಗಡೆ ಮಾಡದಂತೆ ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದವು. ವಿವಿಧ ಸಂಘಟನೆಗಳ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಚಲನಚಿತ್ರ ಬಿಡುಗಡೆಗೆ ನಿಷೇಧ ಹೇರಿದೆ. ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಇತ್ತೀಚೆಗೆ ಖಾಸಗಿ ವಾಹಿನಿಯೊಂದು ʻಹಮಾರೆ ಬಾರಾಹ್ʼ ಎಂಬ ಚಲನಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಷಡ್ಯಂತ್ರವಾಗಿದೆ ಎಂದು ಆರೋಪಿಸಲಾಗಿದೆ. ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿ ʻಹಮಾರೆ ಬಾರಾಹ್ʼ ಚಲನಚಿತ್ರದಲ್ಲಿ ಪವಿತ್ರ ಗ್ರಂಥ ಕುರಾನ್ ಶರೀಫರಲ್ಲಿ ಇರುವ ಸೂರೆ ಎ ಬಕರ ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಸೃಷ್ಟಿಸಿ, ಪ್ರಚೋದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ, ಕೆಲವು ಧರ್ಮದ ಜನರುಗಳನ್ನು ಕೆರಳಿಸುವ, ದ್ವೇಷ ಭಾವನೆ ಪ್ರಚೋದಿಸುವ ಮತ್ತು ಒಂದು ಸಮಾಜವನ್ನು ಅವಹೇಳನಕಾರಿಯಾಗಿ ಬಿಂಬಿಸುವ ಪ್ರಯತ್ನದಂತೆ ಕಾಣುತ್ತದೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ ಎಂದು ಸರ್ಕಾರ ನೊಟೀಸ್ ನಲ್ಲಿ ತಿಳಿಸಿದೆ. Click 👇