ನ್ಯೂಸ್ ನಾಟೌಟ್: ವಿವಾಹಿತ ವ್ಯಕ್ತಿಯ ಜೊತೆ ಕಾಲೇಜು ವಿದ್ಯಾರ್ಥಿನಿ 4 ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈಗ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಕೆರೆಯಲ್ಲಿ ದೊರಕಿದೆ. ಅಗ್ನಿ ಶಾಮಕ ಸಿಬ್ಬಂದಿ ಕೆರೆಯಿಂದ ಹೆಣಗಳನ್ನು ಹೊರ ತೆಗೆದ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ನಡೆದಿದೆ. (love)
ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ವಿದ್ಯಾರ್ಥಿನಿ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ವಿವಾಹಿತ ವ್ಯಕ್ತಿ ರಂಗಶಾಮಣ್ಣ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಇಬ್ಬರು ಕೆಲವು ದಿನಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ತಮ್ಮ ಪ್ರೀತಿಯ ಬಗ್ಗೆ ತಮ್ಮ ಮನೆಗಳಲ್ಲಿ ಹೇಳಿಕೊಂಡಿದ್ದರು. ಆದರೆ ಇವರ ನಡುವಿನ ವಯಸ್ಸಿನ ಅಂತರ ಮತ್ತು ವಿವಾಹಿತ ಪುರುಷನ ಕಾರಣದಿಂದಾಗಿ ಮನೆಯಲ್ಲಿ ಪ್ರೀತಿಯನ್ನು ನಿರಾಕರಿಸಿ ಬುದ್ಧಿ ಹೇಳಿ ಕಳುಹಿಸಿದ್ದರು ಎನ್ನಲಾಗಿದೆ.
ಇದಾದ ಮೇಲೆ ಕಳೆದ 4 ದಿನಗಳ ಹಿಂದೆ ಈ ಪ್ರೇಮಿಗಳು ಮನೆಯಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಆದರೆ ನಿನ್ನೆ(ಜೂ.22) ಮಾವತ್ತೂರು ಕೆರೆಯ ದಡ ಮೇಲೆ ಇಬ್ಬರ ಚಪ್ಪಲಿ ಹಾಗೂ ಮೊಬೈಲ್ ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆ ಕೆರೆಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇಂದು(ಜೂ.23) ಬೆಳಗ್ಗೆ ಇಬ್ಬರ ಮೃತದೇಹಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಪತ್ತೆ ಮಾಡಿ, ಕೆರೆಯಿಂದ ಹೊರ ತೆಗೆದಿದ್ದಾರೆ ಎಂದು ವರದಿ ತಿಳಿಸಿದೆ.
Click 👇