ನ್ಯೂಸ್ ನಾಟೌಟ್: ಇತ್ತೀಚೆಗೆ ಪ್ರಧಾನಿ ಪ್ರಮಾಣ ವಚನದ ದಿನ ಉಗ್ರ ದಾಳಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ೧೦ಕ್ಕೂ ಹೆಚ್ಚು ಯಾತ್ರಾರ್ತಿಗಳು ಕೊನೆಯುಸಿರೆಳೆದಿದ್ದರು. ಈ ಬಳಿಕ ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಮೊರೆತ ಮತ್ತೆ ಜೋರಾಗಿದೆ. ಜಮ್ಮು- ಕಾಶ್ಮೀರವಾದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಭಯೋತ್ಪಾದಕರ ಜೊತೆ ನಡೆದ ಸಂಘರ್ಷದಲ್ಲಿ ಸಿಆರ್ ಪಿಎಫ್ ಜವಾನ ಹುತಾತ್ಮರಾಗಿದ್ದು, ಭದ್ರತಾ ಸಿಬ್ಬಂದಿಗಳು ಗಾಯಗೊಂಡ ಘಟನೆ ಇಂದು(ಜೂ.12) ನಡೆದಿದೆ.
ದೋಡಾ ಜಿಲ್ಲೆಯಲ್ಲಿ, ಭದರ್ವಾ-ಪಥಂಕೋಟ್ ರಸ್ತೆಯಲ್ಲಿ ಇದ್ದ ಜಂಟಿ ಚೆಕ್ ಪೋಸ್ಟ್ ನ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದು, ರಾಷ್ಟ್ರೀಯ ರೈಫಲ್ಸ್ ನ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (SPO) ಗಾಯಗೊಂಡಿದ್ದಾರೆ. ಮತ್ತೊಂದೆಡೆ, ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಜವಾನ ಕಬೀರ್ ದಾಸ್ ನಸುಕಿನ ಜಾವ 3 ಗಂಟೆ ಸುಮಾರಿಗೆ ಕಥುವಾ ಜಿಲ್ಲೆಯ ಸೈದಾ ಸುಖಲ್ ಗ್ರಾಮದಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರು ಮತ್ತು ಹುತಾತ್ಮರಾಗಿದ್ದಾರೆ ಎಂದು ವರದಿ ತಿಳಿಸಿದೆ.
ನಂತರದ ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಈ ಪ್ರದೇಶದಲ್ಲಿ CRPF ಯೋಧರು ಮನೆಗೆ-ಮನೆಗೆ ತೆರಳಿ ಉಗ್ರರ ಸುಳಿವು ದೊರೆತ ಹಿನ್ನೆಲೆಯಲ್ಲಿ ಹುಡುಕಾಟ ನಡೆಯುತ್ತಿದ್ದಾರೆ ಎನ್ನಲಾಗಿದೆ.
Click 👇