ನ್ಯೂಸ್ ನಾಟೌಟ್: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆಯೇ(ಜೂನ್ 03) ಕೊನೆ ದಿನವಾಗಿದೆ. ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆಗೆ ಅವಕಾಶ ನೀಡಿದೆ.
ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಸಿಟಿ ರವಿ ಅವರಿಗೆ ಬಂಪರ್ ಗಿಫ್ಟ್ ಕೊಟ್ಟಿದೆ. ಆದ್ರೆ, ಮಂಡ್ಯ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್ಗೆ ನಿರಾಸೆಯಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡಿರುವ ಸಿಟಿ ರವಿಯನ್ನು ವಿಧಾನ ಪರಿಷತ್ಗೆ ಕಳುಹಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆದಿತ್ತು. ಈ ಬಗ್ಗೆ ಪರೋಕ್ಷವಾಗಿ ಇತ್ತೀಚೆಗೆ ಸ್ವತಃ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದರು. ಅಲ್ಲದೇ ಕೋರ್ ಕಮಿಟಿ ಸಭೆಯಲ್ಲೂ ಸಹ ಪಟ್ಟಿಯಲ್ಲಿ ಸಿಟಿ ರವಿ ಹಾಗೂ ಲೋಕಸಭಾ ಟಿಕೆಟ್ ವಂಚಿತ ಸದಾನಂದಗೌಡ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರ ಹೆಸರುಗಳನ್ನು ಸಹ ಹೈಕಮಾಂಡ್ ಗೆ ಕಳುಹಿಸಲಾಗಿತ್ತು ಎನ್ನಲಾಗಿದೆ.
Click 👇