ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಮತ್ತು ಗ್ಯಾಂಗ್ ಅನ್ನು ಪೊಲೀಸರು ಇಂದು(ಜೂ.15) ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ಮತ್ತೆ 13 ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಜೂ.20ರ ವರೆಗೂ 13 ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿ ಇರಲಿದ್ದು, ಮೈಸೂರಿನಲ್ಲೂ ಸ್ಥಳ ಮಹಜರು ಬಾಕಿ ಇದೆ ಎನ್ನಲಾಗಿದೆ. ಜೊತೆಗೆ ಆರೋಪಿಗಳ ಮೊಬೈಲ್ ಡೇಟಾಗಳು ಇನ್ನೂ ವಶಕ್ಕೆ ಪಡೆದಿಲ್ಲ ಎಂದು ಪೊಲೀಸರು ಕೋರ್ಟ್ ಗೆ ತಿಳಿಸಿದ್ದಾರೆ.
(Darshan Thoogudeepa) ಬಂಧಿತ ಆರೋಪಿಗಳ ಆರು ದಿನಗಳ ಪೊಲೀಸ್ ಕಸ್ಟಡಿ ಭಾನುವಾರಕ್ಕೆ (ಜೂ.15) ಅಂತ್ಯವಾಗಲಿದೆ. ನಾಳೆ ಭಾನುವಾರವಾಗಿರುವುದರಿಂದ ನ್ಯಾಯಾಲಯಕ್ಕೆ ರಜೆ ಇರುತ್ತದೆ. ಹೀಗಾಗಿ, ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಹಾಜರುಪಡಿಸಬೇಕಾಗುತ್ತದೆ. ಹೀಗಾಗಿ, ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಇಂದೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.
Click 👇