ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ‘ದರ್ಶನ್ ಆ್ಯಂಡ್ ಗ್ಯಾಂಗ್ ನಡೆಸಿದ್ದ ವಿಕೃತಿ ದಿನಕ್ಕೊಂದರಂತೆ ಬೆಳಕಿಗೆ ಬರುತ್ತಿದೆ. ರೇಣುಕಾಸ್ವಾಮಿಯನ್ನು ಚಿತ್ರ-ವಿಚಿತ್ರವಾಗಿ ಹಿಂಸೆ ನೀಡಿ ಕೊಲೆ ಮಾಡಿದ್ದು ಮಾತ್ರವಲ್ಲದೇ ಮೈಮೇಲಿದ್ದ ಒಡವೆಗಳನ್ನು ಕೂಡ ದರ್ಶನ್ ಸಹಚರರು ದೋಚಿರುವುದು ತನಿಖೆಯ ವೇಳೆ ಬಯಲಾಗಿದೆ.(Darshan Thoogudeepa)
ರೇಣುಕಾಸ್ವಾಮಿ ಬರ್ಬರ ಕೊಲೆಯ ಬಳಿಕ ಮೈಮೇಲಿದ್ದ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಪೊಲೀಸರ ತನಿಖೆ ವೇಳೆ ಈ ಸ್ಫೋಟಕ ಮಾಹಿತಿಯನ್ನು ಆರೋಪಿ ರವಿ ಎಂಬಾತ ಬಾಯ್ಬಿಟ್ಟಿದ್ದಾನೆ. ರೇಣುಕಾಸ್ವಾಮಿ ಮೈಮೇಲಿದ್ದ ಚಿನ್ನವನ್ನು ಆರೋಪಿ ಜಗ್ಗ ದೋಚಿದ್ದಾನೆ ಎಂದು ಪೊಲೀಸರ ಮುಂದೆ ರವಿ ಸತ್ಯ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಸುಮ್ಮನಹಳ್ಳಿ ಬಳಿ ರೇಣುಕಾಸ್ವಾಮಿ ಶವವನ್ನ ಎಸೆದಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ಶರಣಾಗುವಂತೆ ಹೇಳಿದರು. ಆದರೆ ಭಯದಿಂದ ಠಾಣೆಗೆ ಹೋಗದೆ ಕಾರಿನಲ್ಲಿ ದುರ್ಗಕ್ಕೆ ಬಂದೆ. ಈ ವೇಳೆ ಆರೋಪಿ ಜಗ್ಗ ಚಿನ್ನಾಭರಣ ತೆಗೆದುಕೊಂಡು ನನ್ನ ಜೊತೆಗೆ ಬಂದಿದ್ದ ಎಂದು ರವಿ ಹೇಳಿದ್ದಾನೆ ಎನ್ನಲಾಗಿದೆ.