ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಕೋರ್ಟ್‌ನಿಂದ ತಡೆಯಾಜ್ಞೆ ತಂದ ವಿಜಯಲಕ್ಷ್ಮೀ..! ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದ ದರ್ಶನ್ ಪತ್ನಿ..!

ನ್ಯೂಸ್ ನಾಟೌಟ್ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ನಡೆಯುತ್ತಿದೆ. ಇತ್ತೀಚೆಗೆ ದರ್ಶನ್ ಪತ್ನಿ ತನ್ನ ಇನ್‌ಸ್ಟಾಗ್ರಾಂ ಫೋಟೋಗಳನ್ನು ಡಿಲೀಟ್ ಮಾಡಿ ಭಾರಿ ಸುದ್ದಿಯಾಗಿದ್ದರು. ಈಗ ದರ್ಶನ ಪ್ರಕರಣದ ಕುರಿತು ಕಾನೂನು ಹೋರಾಟ ನಡೆಸುತ್ತಿದ್ದಾರೆ. ಮಾತ್ರವಲ್ಲದೆ ಇನ್‌ಸ್ಟಾಗ್ರಾಂನಲ್ಲಿ ಪ್ರಕರಣದ ಬಳಿಕ ಮೊದಲ ಪೋಸ್ಟ್ ಹಂಚಿಕೊಂಡಿದ್ದಾರೆ.(Darshan Thoogudeepa) ಈ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಆಗಿದ್ದರೆ, ಎ2 ಆರೋಪಿ ನಟ ದರ್ಶನ್‌ ಆಗಿದ್ದಾರೆ. ಅಲ್ಲದೆ, ಈ ಪ್ರಕರಣದಲ್ಲಿ ಹಲವು ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆ ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ. ಈ ಕೋರ್ಟ್ ಆರ್ಡರ್ ಪ್ರತಿಯನ್ನು ಹಂಚಿಕೊಂಡಿದ್ದಾರೆ. ವಿಜಯಲಕ್ಷ್ಮಿ ದರ್ಶನ್‌, ತನ್ನ ಹಾಗೂ ಮಗ, ಪತಿ ದರ್ಶನ್ ಬಗ್ಗೆ ಇಲ್ಲಸಲ್ಲದ ಸುದ್ದಿ ಪ್ರಸಾರ ಮಾಡದಂತೆ ತಡೆಯಾಜ್ಞೆ ತಂದಿದ್ದು, ಈ ಬಗ್ಗೆ ಇಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ. ಕೊಲೆ ಆರೋಪದಲ್ಲಿ ದರ್ಶನ್‌ ಬಂಧವಾಗಿದ್ದರೂ ಅವರ ಪರ ಯಾವುದೇ ಕುಟುಂಬದವರು ನಿಂತಿಲ್ಲ. ಬದಲಾಗಿ ಪತ್ನಿ ವಿಜಯಲಕ್ಷ್ಮಿ ಒಬ್ಬರೇ ಅವರ ಪರವಾಗಿ ನಿಂತಿದ್ದು, ಅವರನ್ನು ಜೈಲಿನಿಂದ ಹೊರತರಲು ವಕೀಲರನ್ನು ನೇಮಿಸಿ ಒಬ್ಬಂಟಿಯಾಗಿ ಹೋರಾಟ ನಡೆಸುತ್ತಿದ್ದಾರೆ. ಅಲ್ಲದೆ, ಇದೀಗ ದೀಢರ್‌, ನನ್ನ, ಮಗ ಹಾಗೂ ದರ್ಶನ್‌ ಕುಟುಂಬಂದ ವಿರುದ್ಧ ಯಾವುದೇ ಸುಳ್ಳುಸುದ್ದಿಗಳನ್ನು ಪ್ರಕಟಿಸುವಂತಿಲ್ಲ ಎಂದು ಸ್ಟೇ ಆರ್ಡರ್‌ ತಂದಿದ್ದಾರೆ. ಜೊತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. View this post on Instagram A post shared by Vijayalakshmi darshan (@viji.darshan) “ಮೊದಲಿಗೆ, ಶ್ರೀ. ರೇಣುಕಾಸ್ವಾಮಿ ಅವರ ಕುಟುಂಬಸ್ತರಿಗೆ ನಾನು ಹೃದಯಪೂರ್ವಕ ಸಾಂತ್ವನವನ್ನು ತಿಳಿಸಲು ಬಯಸುತ್ತೇನೆ. ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಮನೆಯವರಿಗೆ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಕಳೆದ ಕೆಲವು ದಿನಗಳಲ್ಲಿ, ದರ್ಶನ್ ಅವರು, ನಾನು, ನಮ್ಮ ಮಗ, ದರ್ಶನರ ಸೆಲೆಬ್ರಿಟೀಸ್ ಮತ್ತು ಕುಟುಂಬದವರು ಪದಗಳಲ್ಲಿ ವಿವರಿಸಲಾಗದ ನೋವನ್ನು ಅನುಭವಿಸಿದ್ದೇವೆ. ಗೌರವಾನ್ವಿತ ನ್ಯಾಯಾಲಯದ ಮೇಲ್ಕಂಡ ಆದೇಶದಂತೆ, ಇನ್ನು ಮುಂದಾದರೂ ಅಸತ್ಯಗಳು ಹಾಗೂ ಅನಧೀಕೃತ ಮಾಹಿತಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗದಿರಲಿ ಎಂದು ಕೇಳಿಕೊಳ್ಳುತ್ತೇನೆ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ನ್ಯಾಯ ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಸತ್ಯಮೇವ ಜಯತೆ!” ಎಂದು ಬರೆದುಕೊಂಡಿದ್ದಾರೆ. Click 👇