- +91 73497 60202
- [email protected]
- November 22, 2024 10:34 AM
ನ್ಯೂಸ್ ನಾಟೌಟ್: ಜೂನ್ 11 ರ ಮಂಗಳವಾರ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಬಂಧನವಾಗಿದ್ದರು. ಜೂನ್ 11 ರಿಂದ ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ. ನಾಳೆ(ಜೂ.20) ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ನಾಳೆ ಕೋರ್ಟ್‌ಗೆ ದರ್ಶನ್ ಹಾಗೂ ಸಹಚರರನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಇಂದು (ಜೂನ್19) ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಬಂದಿದ್ದಾರೆ ಎಂದು ವರದಿಯಾಗಿದೆ. (Darshan Thoogudeepa) ವಿಜಯಲಕ್ಷ್ಮಿ ಮಾತ್ರವೇ ಠಾಣೆಗೆ ಆಗಮಿಸಿದ್ದಾರೆ, ಪುತ್ರ ವಿನೀಶ್ ಬಂದಿಲ್ಲ ಎನ್ನಲಾಗುತ್ತಿದೆ. ಜೊತೆಗೆ ದರ್ಶನ್ ಪರ ವಕೀಲರನ್ನು ನೇಮಿಸಿದ್ದ ಪತ್ನಿ ವಿಜಯಲಕ್ಷ್ಮಿ ರೇಣುಕಾಸ್ವಾಮಿ ಹತ್ಯೆಯ ಬಳಿಕ ದರ್ಶನ್ ಜೊತೆ ಪೂಜೆಯೊಂದರಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ಹೇಳಿಕೆ ನೀಡಲು ನೋಟಿಸ್ ನೀಡಿ ವಿಚಾರಣೆಗೆ ಪೊಲೀಸರು ಕರೆಸಿಕೊಂಡಿದ್ದಾರೆ ಎನ್ನಲಾಗಿದೆ. ಇಂದು(ಜೂ.19) 45 ನಿಮಿಷಗಳ ಕಾಲ ವಿಜಯಲಕ್ಷ್ಮಿ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಆದ ಬಳಿಕ ವಿಜಯಲಕ್ಷ್ಮಿ ಅಪಾರ್ಟ್‌ಮೆಂಟ್ ಗೆ ದರ್ಶನ್ ಹೋಗಿದ್ದರು. ಅಲ್ಲಿ ತಮ್ಮ ಬಟ್ಟೆಗಳನ್ನು ಬದಲಿಸಿದ್ದರು. ಶೂಗಳನ್ನು ಸಹ ಅಲ್ಲಿಯೇ ಬಿಟ್ಟಿದ್ದರು. ಆ ವಿಚಾರದ ಬಗ್ಗೆಯೂ ವಿಜಯಲಕ್ಷ್ಮಿ ಅವರನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ