ನ್ಯೂಸ್ ನಾಟೌಟ್: ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಅನೇಕರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ಎಲ್ಲಾ ಆರೋಪಿಗಳನ್ನೂ ಇಂದು(ಜೂ.20) ಸಂಜೆ ಕೋರ್ಟ್ ಗೆ ಹಾಜರು ಪಡಿಸಿದ್ದು, ಇಂದೇ ಭವಿಷ್ಯ ನಿರ್ಧಾರವಾಗುತ್ತಾ ಅಥವಾ ಮತ್ತೆ ಪೊಲೀಸರು ದರ್ಶನ್ ಮತ್ತು ಗ್ಯಾಂಗ್ ಅನ್ನು ಕಸ್ಟಡಿಗೆ ಕೇಳುತ್ತಾರೋ ಅನ್ನುವುದು ಕಾದು ನೋಡಬೇಕಾಗಿದೆ.
ಈಗಾಗಲೇ ಹಲವು ಸುತ್ತಿನ ವಿಚಾರಣೆ ನಡೆಸಲಾಗಿದೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಈ ಮೂಲಕ ನೂರಾರು ಬಗೆಯ ಸಾಕ್ಷ್ಯಗಳನ್ನು ಕಲೆ ಹಾಕಲಾಗಿದೆ. ಜೂನ್ 19 ರಂದು ದರ್ಶನ್(Darshan) ಮತ್ತು ಪವಿತ್ರಾ ಗೌಡ ಮತ್ತು ಇತರ ಆರೋಪಿಗಳ ಡಿಎನ್ಎ ಟೆಸ್ಟ್ (DNA Test) ಮಾಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಡಿಎನ್ಎ ಪರೀಕ್ಷೆ ಮಾಡಲಾಗಿದೆ.
ಒಟ್ಟು 9 ಆರೋಪಿಗಳ ಸ್ಯಾಂಪಲ್ಸ್ ಪಡೆದುಕೊಳ್ಳಲಾಗಿದೆ. ಆರೋಪಿಗಳ ರಕ್ತ ಮತ್ತು ಕೂದಲಿನ ಮಾದರಿ ಸಂಗ್ರಹಿಸಲಾಗಿದೆ. ರೇಣುಕಾ ಸ್ವಾಮಿ ಹತ್ಯೆ ನಡೆದ ಸ್ಥಳದಲ್ಲಿ ಪತ್ತೆಯಾದ ಕೂದಲು ಹಾಗೂ ರಕ್ತದ ಮಾದರಿಯ ಜೊತೆ ಇವು ಮ್ಯಾಚ್ ಆಗುತ್ತದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತಿದೆ. ಅದನ್ನುಎಫ್ಎಸ್ಎಲ್ಗೆ (ವಿಧಿ ವಿಜ್ಞಾನ ಪ್ರಯೋಗಾಲಯ) ಕಳುಹಿಸಲಾಗುತ್ತದೆ. ಒಂದು ವೇಳೆ, ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕೂದಲು, ರಕ್ತದ ಮಾದರಿಗಳು ಆರೋಪಿಗಳ ಸ್ಯಾಂಪಲ್ ಜೊತೆ ಮ್ಯಾಚ್ ಆದರೆ ಅದು ಪ್ರಮುಖ ಸಾಕ್ಷ್ಯ ಆಗಲಿದೆ.
Click 👇