ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಮಳೆಯ ಅಬ್ಬರ ಜೋರಾಗಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ.
ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಗುರುವಾರ ಭಾರಿ ಮಳೆ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.