ಅರಣ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಆಗಿದ್ದ ದಾಸನಿಗೆ ಬಾತುಕೋಳಿಯಿಂದ ಕಂಟಕ..! ಕೊಲೆ ಪ್ರಕರಣದ ಬೆನ್ನಲ್ಲೇ ಅರಣ್ಯ ಇಲಾಖೆಯಿಂದ ನಟ ದರ್ಶನ್ ಮೇಲೆ ಮತ್ತೊಂದು ಎಫ್.ಐ.ಆರ್..!

ನ್ಯೂಸ್ ನಾಟೌಟ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತೊಂದು ಎಫ್.ಐ.ಆರ್ ದಾಖಲಿಸಿದ್ದಾರೆ. ಅನುಮತಿ ಪಡೆಯದೆ ಮೈಸೂರಿನ ಟಿ ನರಸೀಪುರದಲ್ಲಿರುವ ತಮ್ಮ ಫಾರ್ಮ್ ಹೌಸ್‌ನಲ್ಲಿ ನಾಲ್ಕು ಬಾರ್‌ ಹೆಡೆಡ್‌ ಗೂಸ್‌ (ವಿಶಿಷ್ಟ ಪ್ರಭೇದದ ಅಳಿವಿನಂಚಿನಲ್ಲಿರುವ ಬಾತುಕೋಳಿ)ಗಳನ್ನು ಸಾಕಿದ್ದ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದರ್ಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಅರಣ್ಯ ಇಲಾಖೆಯ ವಿಚಕ್ಷಣಾ ವಿಭಾಗದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಅಗತ್ಯವಿರುವ ಸೆಕ್ಷನ್‌ಗಳ ಅಡಿಯಲ್ಲಿ ಐದು ನೋಟಿಸ್‌ಗಳನ್ನು ಜಾರಿ ಮಾಡಲಾಗಿದೆ. ಬಾರ್‌ ಹೆಡೆಡ್‌ ಗೂಸ್‌ (ವಿಶಿಷ್ಟ ಪ್ರಭೇದದ ಬಾತುಕೋಳಿ)ಗಳನ್ನು ವನ್ಯಜೀವಿ ಸಂರಕ್ಷಣಾ ಕಾಯಿದೆ, 1972 ಪಟ್ಟಿ-1 ರ ಅಡಿಯಲ್ಲಿ ಪಟ್ಟಿ ಮಾಡಲಾಗಿದೆ. ಅವುಗಳನ್ನು ಸಾಕುವುದು ಅಥವಾ ಹಿಡಿಯುವುದು ನಿಯಮಗಳ ಪ್ರಕಾರ ಅಪರಾಧವಾಗಿದ್ದು, ಈ ಪ್ರಕರಣ ಜಾಮೀನು ರಹಿತ ಅಪರಾಧವಾಗಿದೆ. Click 👇