ನ್ಯೂಸ್ ನಾಟೌಟ್: ಬಿಜೆಪಿಗೆ ಸ್ವಾತಂತ್ರ್ಯ ನಂತರ ಕೇರಳದಲ್ಲಿ ಮೊದಲ ಬಾರಿಗೆ ಕ್ಷೇತ್ರ ಗೆದ್ದು ಕೊಟ್ಟ ಕೀರ್ತಿ ನಟ, ಸಂಸದ ಸುರೇಶ್ ಗೋಪಿಗೆ ಸಲ್ಲುತ್ತದೆ. ಕೇರಳದಲ್ಲಿ ನಿನ್ನೆಯಷ್ಟೇ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೆ ಎಂಬ ವದಂತಿ ಹಬ್ಬಿತ್ತು, ಈ ಬಗ್ಗೆ ಸಚಿವರೇ ಸ್ಪಷ್ಟನೆ ನೀಡಿದ್ದಾರೆ.
ನಿನ್ನೆ(ಜೂ.09) ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಬಿಜೆಪಿ ಸಂಸದ ಸುರೇಶ್ ಗೋಪಿ ಟ್ವೀಟ್ ಮಾಡಿ, ”ನಾನು ಮೋದಿ ಸರ್ಕಾರದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಮಗಳು ತಪ್ಪು ಸುದ್ದಿಯನ್ನು ಹರಡುತ್ತಿವೆ. ಇದು ಸಂಪೂರ್ಣ ಸುಳ್ಳು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಾವು ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದೇವೆ” ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ, ಕೇರಳದ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್, ದಕ್ಷಿಣ ರಾಜ್ಯದ ಪಕ್ಷದ ಘಟಕದಲ್ಲಿ ಸಿಬ್ಬಂದಿ ಬದಲಾವಣೆಯಾಗಲಿದೆ ಎಂಬ ವರದಿಗಳನ್ನೂ ಕೂಡ ಸುಳ್ಳು ಎಂದು ಸುರೇಶ್ ಗೋಪಿ ತಳ್ಳಿಹಾಕಿದ್ದಾರೆ. ಕೇರಳದ ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ನಟ-ರಾಜಕಾರಣಿ ಸುರೇಶ್ ಗೋಪಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಕ್ಯಾಬಿನೆಟ್ ಅಥವಾ MoS (ಸ್ವತಂತ್ರ) ಉಸ್ತುವಾರಿ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವರದಿಗಳು ಹರಿದಾಡಿತ್ತು. ಆದರೆ ಅವರು ಇದು “ನಕಲಿ ಸುದ್ದಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Click 👇