ನ್ಯೂಸ್ ನಾಟೌಟ್ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ(government employees) ಬಹುನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ.
ಇಂದು (ಜೂನ್ 20) ವಿಧಾನಸೌಧದ ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಲಾಗಿದೆ. ಈ ಮೂಲಕ ಏಳನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾದಂತಾಗಿದೆ.
ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಶೇ.25ರಷ್ಟು ಹೆಚ್ಚಳಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೆಲ ಸಚಿವರು ಸಲಹೆ ನೀಡಿದ್ದಾರೆ. ಅಂತಿಮವಾಗಿ ಸಂಪುಟ ಸಭೆ ಆಯೋಗದ ಶಿಫಾರಸು ಜಾರಿ ಅಧಿಕಾರವನ್ನ ಸಿಎಂಗೆ ನೀಡಿದ್ದು, ವೇತನ ಶೇ.27ರಷ್ಟು ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಹ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿವೆ.
Click 👇