ನ್ಯೂಸ್ ನಾಟೌಟ್: ಮಾಜಿ ಸಿಎಂ, ಮಂಡ್ಯ ಸಂಸದ ಹೆಚ್ಡಿ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಸಂಪುಟ ಸೇರುವುದು ಖಚಿತವಾಗಿದೆ ಎಂದು ವರದಿ ತಿಳಿಸಿದೆ. ಕುಮಾರಸ್ವಾಮಿ ಇಂದು(ಜೂನ್.9) ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಾ.ಮಂಜುನಾಥ್ ಹೇಳಿದ್ದಾರೆ.
ಕುಮಾರಸ್ವಾಮಿ ಸಚಿವರಾಗುತ್ತಿರುವುದು ಖುಷಿ ತಂದಿದೆ. ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಿದೆ ಎಂದು ಡಾ. ಮಂಜುನಾಥ್ ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇಂದು ಸಂಜೆ 7:15ಕ್ಕೆ ಸರಿಯಾಗಿ ರಾಷ್ಟ್ರಪತಿ ಭವನದಲ್ಲಿ ಮೋದಿ (Narendra Modi) ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ.
ಈ ಮೂಲಕ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರ ಹಿಡಿಯಲಿದೆ. ಮೋದಿ ಪ್ರಮಾಣವಚನ ನಡೆದ ಬೆನ್ನಲ್ಲೇ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಇದರಲ್ಲಿ ಹೆಚ್.ಡಿ ಕುಮಾರಸ್ವಾಮಿಯೂ ಒಬ್ಬರು ಎನ್ನಲಾಗಿದೆ. ಗೃಹ, ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳಂತಹ ಮಹತ್ವದ ಖಾತೆಗಳನ್ನು ಬಿಜೆಪಿ ಇಟ್ಟುಕೊಳ್ಳಲಿದ್ದು ಉಕ್ಕು, ನಾಗರಿಕ ವಿಮಾನಯಾನ ಮತ್ತು ಕಲ್ಲಿದ್ದಲು ಮುಂತಾದ ಖಾತೆಗಳು ಮಿತ್ರ ಪಕ್ಷಗಳಿಗೆ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ.
Click 👇