- +91 73497 60202
- [email protected]
- November 25, 2024 2:22 AM
ಸರ್ಕಾರಿ ಕಟ್ಟಡದ ಬಹುಮಹಡಿಯಿಂದ ಜಿಗಿದ ಮಗಳು..! ಅಪ್ಪ-ಅಮ್ಮ ಇಬ್ಬರೂ ಐಎಎಸ್ ಅಧಿಕಾರಿಗಳು..!
ನ್ಯೂಸ್ ನಾಟೌಟ್: ಐಎಎಸ್ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ (ಜೂನ್.3) ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿಯ ಪುತ್ರಿ ಲಿಪಿ ರಸ್ತೋಗಿ (27) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ಗುರುತಿಸಲಾಗಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ. ಕಾನೂನು ವಿದ್ಯಾರ್ಥಿನಿಯಾಗಿದ್ದ ಲಿಪಿ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ರಾಜ್ಯ ಸಚಿವಾಲಯದ ಬಳಿಯ ಕಟ್ಟಡದ 10 ನೇ ಮಹಡಿಯಿಂದ ಜಿಗಿದಿದ್ದಾರೆ. ಆಕೆಯ ಕೋಣೆಯಲ್ಲಿ ಡೆತ್ ನೋಟ್ ಒಂದು ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಿಪಿ ಹರಿಯಾಣದ ಸೋನೆಪತ್‌ನಲ್ಲಿ ಕಾನೂನು ವ್ಯಾಸಾಂಗ ಮಾಡುತ್ತಿದ್ದಳು. ಪೊಲೀಸ್ ಅಧಿಕಾರಿಗಳ ಪ್ರಕಾರ, ಅವಳು ಪರೀಕ್ಷೆಗಳ ಬಗ್ಗೆ ಆತಂಕದಲ್ಲಿದ್ದಳು ಎನ್ನಲಾಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ